Udayavni Special

ಮಾತೆ ಮಹಾದೇವಿ ಅಂತ್ಯಸಂಸ್ಕಾರ

Team Udayavani, Mar 17, 2019, 12:34 AM IST

1-b.jpg

ಬಾಗಲಕೋಟೆ: ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಲಿಂಗೈಕ್ಯರಾದ ಕೂಡಲಸಂಗಮ ಬಸವ ಧರ್ಮ ಪೀಠದ ಎರಡನೇ ಪೀಠಾಧ್ಯಕ್ಷೆ ಡಾ| ಮಾತೆ ಮಹಾದೇವಿ ಅವರ ಅಂತ್ಯಸಂಸ್ಕಾರ ಶನಿವಾರ ಲಿಂಗಾಯತ ಧರ್ಮದ ವಿಧಿ-ವಿಧಾನಗಳೊಂದಿಗೆ ನೆರವೇರಿತು.

ಡಾ|ಮಾತೆ ಮಹಾದೇವಿ ಅವರ ಉತ್ತರಾಧಿಕಾರಿ ಮಾತೆ ಗಂಗಾದೇವಿ, ಚಿತ್ರದುರ್ಗ ಮುರುಘಾಮಠದ ಶ್ರೀ ಮುರಘಾ ಶರಣರು, ಭಾಲ್ಕಿ ಪಟ್ಟದ್ದೇವರು, ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮುಂಡರಗಿಯ ಶ್ರೀ ನಿಜಗುಣಾನಂದ ಸ್ವಾಮೀಜಿ ಸೇರಿ ನಾಡಿನ 25ಕ್ಕೂ ಹೆಚ್ಚು ಮಠಾಧೀಶರು ಕ್ರಿಯಾಸಮಾಧಿ ವೇಳೆ ಅಂತಿಮ ವಿಧಿ ವಿಧಾನ ನಡೆಸಿದರು. ಬಸವ ಧರ್ಮ ಪೀಠದ ಆವರಣದ ಶರಣ ಲೋಕದ ಬಳಿ ಘಣಲಿಂಗದ ಬಲ ಭಾಗದಲ್ಲಿ 24 ವರ್ಷಗಳ ಹಿಂದೆಯೇ ಕ್ರಿಯಾಸಮಾಧಿ ನಿರ್ಮಿಸಲಾಗಿತ್ತು. 6 ಅಡಿ ಎತ್ತರ, 5 ಅಡಿ ಅಗಲದ ಸಿಮೆಂಟ್‌ (ಕಾಂಕ್ರೀಟ್‌)ನಿಂದ ನಿರ್ಮಿಸಿದ ಇಷ್ಟಲಿಂಗ ಆಕೃತಿ ಹೊಂದಿದ ಸಮಾಧಿಯಲ್ಲಿ ಅಂತ್ಯಸಂಸ್ಕಾರ ಕ್ರಿಯೆಗಳನ್ನು ನೆರವೇರಿಸಲಾಯಿತು.

ಇದಕ್ಕೂ ಮುನ್ನ ಇಷ್ಟಲಿಂಗ ಆಕೃತಿಯ ಕ್ರಿಯಾಸಮಾಧಿ ಸುತ್ತಲೂ ತ್ಯಾಗಾಂಗ, ಭೋಗಾಂಗ, ಯೋಗಾಂಗ ಹೀಗೆ ಮೂರು ಹಂತಗಳಲ್ಲಿ ವಿಭೂತಿ ಜೋಡಿಸಲಾಗಿತ್ತು. ನಂತರ ಷಟ್ಕೊàನ ಆಕಾರ ಹಾಕಿ, ಅದರಲ್ಲಿ ಮಾತಾಜಿಯವರ ಶರೀರ ಇರಿಸಿ ಭಕ್ತ, ಮಹೇಶ, ಪ್ರಸಾದಿ, ಪ್ರಾಣಲಿಂಗ, ಶರಣ, ಐಕ್ಯಹೀಗೆ ಷಟ್‌ಸ್ಥಳ ಸೂಚಕವಾಗಿ ವಿಭೂತಿ ಧಾರಣೆ ಕ್ರಿಯೆ ನಡೆಯಿತು. ಅಂತಿಮವಾಗಿ ವಚನ ಪ್ರಾರ್ಥನೆ ಸಲ್ಲಿಸಲಾಯಿತು.

ಲಿಂಗಾಯತ ಮತ್ತು ಬಸವ ತತ್ವಗಳ ಅನುಗುಣವಾಗಿ ಸುಮಾರು 2 ಗಂಟೆಗಳ ಕಾಲ ಅಂತಿಮ ಕ್ರಿಯಾಸಮಾಧಿ ಕಾರ್ಯ ನಡೆದವು. ಜೀವಿತಾವಧಿಯಲ್ಲಿ ಅವರು ಲಿಂಗಾಯತ ಪರಂಪರೆ-ಸಂಸ್ಕೃತಿ-ಕ್ರಿಯಾವಿಧಿ ಕುರಿತು ಬರೆದಿದ್ದ ಲಿಂಗಾಯತ ಸಂಸ್ಕಾರ ಎಂಬ ಪುಸ್ತಕದಲ್ಲಿ ದಾಖಲಿಸಿದ ರೀತಿಯಲ್ಲೇ ಅವರ ಅಂತ್ಯಸಂಸ್ಕಾರ ನಡೆಸಲಾಯಿತು.

ಪೊಲೀಸ್‌ ಗೌರವ: ಗೃಹ ಸಚಿವ ಎಂ.ಬಿ. ಪಾಟೀಲರ ವಿಶೇಷ ಆಸಕ್ತಿ ಮೇರೆಗೆ ಡಾ| ಮಾತೆ ಮಹಾದೇವಿ ಅವರಿಗೆ ಪೊಲೀಸ್‌ ಗೌರವ ಸಲ್ಲಿಸಲಾಯಿತು. ಬಸವ ಧರ್ಮ ಪೀಠದ ಆವರಣದಲ್ಲಿ ಮಾತಾಜಿಯವರಿಗೆ ಪೊಲೀಸರ ತಂಡ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಅಂತಿಮ ಗೌರವ ಸಲ್ಲಿಸಿತು. ಬಳಿಕ ಗೃಹ ಸಚಿವ ಎಂ.ಬಿ. ಪಾಟೀಲ, ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌, ಜಿಪಂ ಸಿಇಒ ಗಂಗೂಬಾಯಿ ಮಾನಕರ ಸೇರಿ ಇತರರು ಮಾತಾಜಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುತ್ಛಅರ್ಪಿಸಿ ಗೌರವ ಸಲ್ಲಿಸಿದರು.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದ ದುಷ್ಕರ್ಮಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಹಾಲಪ್ಪ ಆಚಾರ್

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.