ಕಲ್ಲು, ಮರಳು ಗಣಿಗಾರಿಕೆ ಬಾಬ್ತಿನ ರಾಜಧನ ಸೋರಿಕೆ ತಡೆಗಟ್ಟಲು ಕ್ರಮ: ಸಿಎಂ ಬೊಮ್ಮಾಯಿ

Team Udayavani, Sep 22, 2022, 9:30 PM IST

16-cm

ವಿಧಾನಸಭೆ: ಕಲ್ಲು ಹಾಗೂ ಮರಳು ಗಣಿಗಾರಿಕೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ರಾಜಧನ ಸೋರಿಕೆ ತಪ್ಪಿಸಲು ಉಪಗ್ರಹ ಹಾಗೂ ಡ್ರೋಣ್‌ ಮೂಲಕ ಸಮೀಕ್ಷೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

14,762.20 ರೂ.ಗಳ ಪೂರಕ ಅಂದಾಜಿನ ಮೊದಲ ಕಂತು ಮಂಡಿಸಿದ  ಸಂದರ್ಭದಲ್ಲಿ ಕಾಂಗ್ರೆಸ್‌ನ ಕೃಷ್ಣ ಬೈರೇಗೌಡ, ಕಲ್ಲು ಹಾಗೂ ಮರಳು ಗಣಿಗಾರಿಕೆ ರಾಜ್ಯಕ್ಕೆ ಬರಬೇಕಾದ ಸಾವಿರಾರು ಕೋಟಿ ರೂ. ರಾಜಧನ ಸೋರಿಕೆಯಾಗುತ್ತಿದೆ. ಸಿಎಜಿ ವರದಿ ಹಾಗೂ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ವರದಿಯಲ್ಲೂ ಇದು ಪ್ರಸ್ತಾಪವಾಗಿದೆ. ಇದಕ್ಕೆ ಕಡಿವಾಣ ಹಾಕಿ ಎಂದು ತಿಳಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಈ ವಿಚಾರ ತಮ್ಮ ಗಮನದಲ್ಲಿದೆ. ಕೈಯಿಂದ ಕಲ್ಲು ಒಡೆದು ಜೀವನ ಸಾಗಿಸುವವರೂ ಇದ್ದಾರೆ. ಯಂತ್ರಗಳ ಮೂಲಕ ಕಲ್ಲು ಗಣಿಗಾರಿಕೆ ಮಾಡುವವರೂ ಇದ್ದಾರೆ. ಹೀಗಾಗಿ ಇದರಲ್ಲೇ ಜೀವನ ಸಾಗಿಸುವವರಿಗೆ ವಿನಾಯಿತಿ ನೀಡಿ ಯಂತ್ರಗಳಿಂದ ಕಲ್ಲು ಗಣಿಗಾರಿಕೆ ನಡೆಸುವವರಿಗೆ ಕೆಲವೊಂದು ನಿಯಮ ಹೇರಬೇಕಾಗಿದೆ. ಅಕ್ರಮ ತಡೆಗಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೃಷ್ಣ ಬೈರೇಗೌಡರು, ಕೇಂದ್ರದಿಂದ ರಾಜ್ಯಕ್ಕೆ 14,100 ಕೋಟಿ ರೂ. ಜಿಎಸ್‌ಟಿ ಪರಿಹಾರ ಬರಬೇಕಿದೆ. ಅದು ಬಂದರೆ ನಮ್ಮ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ ಎಂದು ತಿಳಿಸಿದರು.

ಇದಕ್ಕೆ ಮುಖ್ಯಮಂತ್ರಿಯವರು ನಾವು ಜಿಎಸ್‌ಟಿ ಪರಿಹಾರ 5 ಸಾವಿರ ಕೋಟಿ ರೂ. ನಿರೀಕ್ಷೆ ಮಾಡಿದ್ದೆವು. ಆದರೆ, 8633 ಕೋಟಿ ರೂ. ಬಂದಿದೆ. ಆರು ಸಾವಿರ ಕೋಟಿ ರೂ. ಪರಿಹಾರ ಸಂಬಂಧ ಲೆಕ್ಕಪರಿಶೋಧನೆ ವರದಿ ಸಲ್ಲಿಸಬೇಕಾಗಿದೆ. ಅದು ಸಲ್ಲಿಕೆಯಾದ ತಕ್ಷಣ ಬರಲಿದೆ ಎಂದು ಸಮಜಾಯಿಷಿ ನೀಡಿದರು.

ಪೂರಕ ಅಂದಾಜಿನಲ್ಲಿ ಒದಗಿಸಿರುವ ಅನುದಾನದ ಬಗ್ಗೆ ಮಾಹಿತಿ ನೀಡಿದರು. ಕಾಂಗ್ರೆಸ್‌ನ ರಮೇಶ್‌ಕುಮಾರ್‌, ಎಚ್‌.ಕೆ.ಪಾಟೀಲ್‌, ಜೆಡಿಎಸ್‌ನ ಶಿವಲಿಂಗೇಗೌಡ ಕೆಲವೊಂದು ಸಲಹೆ ನೀಡಿದರು. ನಂತರ ಪೂರಕ ಅಂದಾಜಿಗೆ ಅನುಮೋದನೆ ನೀಡಲಾಯಿತು.

ಟಾಪ್ ನ್ಯೂಸ್

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ರಥೋತ್ಸವ ಸಂಪನ್ನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ರಥೋತ್ಸವ ಸಂಪನ್ನ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಸಾವಿನ ಮನೆಯಲ್ಲಿ ಬಿಜೆಪಿ ರಾಜಕೀಯ: ಶಾಸಕ ಖಾದರ್‌

ಸಾವಿನ ಮನೆಯಲ್ಲಿ ಬಿಜೆಪಿ ರಾಜಕೀಯ: ಶಾಸಕ ಖಾದರ್‌

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

1-asdadad

ಹಲವು ದಶಕಗಳ ನಂತರ ಮತ್ತೆ ಕಾಶ್ಮೀರದಲ್ಲಿ ನೆಲೆಸಳಿದ್ದಾಳೆ ಶಾರದೆ

ಆರ್‌ಟಿಇ ಶುಲ್ಕ ಮರು ಪಾವತಿಗೆ ಕ್ರಿಯಾ ಯೋಜನೆ ರೂಪಿಸಿದ ಶಿಕ್ಷಣ ಇಲಾಖೆ

ಆರ್‌ಟಿಇ ಶುಲ್ಕ ಮರು ಪಾವತಿಗೆ ಕ್ರಿಯಾ ಯೋಜನೆ ರೂಪಿಸಿದ ಶಿಕ್ಷಣ ಇಲಾಖೆ

1-a-dsd-s

ಮೈಸೂರಿನಲ್ಲಿ ಟೂರಿಸಂ ಸರ್ಕಿಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

1-sdsadadad

ಬಿಆರ್ ಎಸ್-ಜೆಡಿಎಸ್ ಮೈತ್ರಿ; ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ: ಹೆಚ್ ಡಿಕೆ

MUST WATCH

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

udayavani youtube

ದಿನ7 | ಕಾಳರಾತ್ರಿ ದೇವಿ

ಹೊಸ ಸೇರ್ಪಡೆ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ರಥೋತ್ಸವ ಸಂಪನ್ನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ರಥೋತ್ಸವ ಸಂಪನ್ನ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.