ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ: ಜಾರಕಿಹೊಳಿಗೆ ಆತಂಕ

Team Udayavani, Apr 1, 2021, 6:00 AM IST

ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ: ಜಾರಕಿಹೊಳಿಗೆ ಆತಂಕ

ಬೆಂಗಳೂರು:  ಸಿ.ಡಿ. ಪ್ರಕರಣದ ಸಂತ್ರಸ್ತೆಯನ್ನು ಬುಧವಾರ  ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿ  ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು.  ಈ ಬೆಳವಣಿಗೆಯಿಂದ  ರಮೇಶ್‌ ಜಾರಕಿಹೊಳಿಗೆ ಆತಂಕ ಶುರುವಾಗಿದ್ದು, ಸದ್ಯದಲ್ಲೇ ಅವರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸುವ  ಸಾಧ್ಯತೆಗಳಿದೆ.

ಯುವತಿಯು  ಬಿಗಿ ಪೊಲೀಸ್‌ ಭದ್ರತೆಯಲ್ಲಿ ವಕೀಲರ ತಂಡದ ಜತೆ ಬೆಳಗ್ಗೆ 9.30ರ ಸುಮಾರಿಗೆ ಆಡುಗೋಡಿ ಯ ಎಸ್‌ಐಟಿ ಟೆಕ್ನಿಕಲ್‌ ಸೆಲ್‌ಗೆ ಆಗಮಿಸಿದ್ದು, ಬಳಿಕ ಆಕೆಯನ್ನು ತನಿಖಾಧಿಕಾರಿ ಕವಿತಾ ನೇತೃತ್ವದಲ್ಲಿ  ಶಿವಾಜಿ ನಗರದಲ್ಲಿರುವ ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಬೆಳಗ್ಗೆ 11ರಿಂದ ಸಂಜೆ  4ರವರೆಗೆ  ಪರೀಕ್ಷೆ ನಡೆಸಲಾಯಿತು.  ಆಕೆಯ ಕೂದಲು, ಉಗುರು, ರಕ್ತದ ಮಾದರಿಗಳನ್ನೂ ಸಂಗ್ರಹಿಸಲಾಯಿತು.

ಕೌನ್ಸೆಲಿಂಗ್‌ :

ಸಂತ್ರಸ್ತೆಯು ವೈದ್ಯಕೀಯ ಪರೀಕ್ಷೆ ಸಂದರ್ಭದಲ್ಲಿ ಮುಜುಗರಗೊಂಡು ಆತಂಕ ವ್ಯಕ್ತಪಡಿಸಿದಳು.  ಬಳಿಕ ಆಕೆಗೆ ಆಸ್ಪತ್ರೆಯ “ವಯೊಲೆನ್ಸ್‌  ಎಗೈನ್ಸ್‌$r  ವುಮೆನ್‌ ಸೆಂಟರ್‌’ನಲ್ಲಿ  ಆಪ್ತಸಮಾಲೋಚಕರಿಂದ ಕೌನ್ಸೆಲಿಂಗ್‌ ಕೊಡಿಸಿ  ವೈದ್ಯಕೀಯ ಪರೀಕ್ಷೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ. ಆಸ್ಪತ್ರೆಯಲ್ಲಿ ಆಕೆಯ ವಕೀಲರ ತಂಡದವರೂ ಉಪಸ್ಥಿತರಿದ್ದರು.

ಸದ್ಯದಲ್ಲೇ ಜಾರಕಿಹೊಳಿ  ತಪಾಸಣೆ? :

ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಮಾತ್ರವಲ್ಲದೆ, ಆರೋಪಿಯನ್ನೂ  ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಈಗಾಗಲೇ ಯುವತಿ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಿ, ವೈದ್ಯಕೀಯ ಪರೀಕ್ಷೆಗೊಳಪಟ್ಟಿದ್ದಾರೆ. ಹೀಗಾಗಿ ಸದ್ಯದಲ್ಲೇ ಪ್ರಕರಣದ ಆರೋಪಿ ರಮೇಶ್‌ ಜಾರಕಿಹೊಳಿ ಅವರನ್ನು ಎಸ್‌ಐಟಿ  ವೈದ್ಯಕೀಯ ಪರೀಕ್ಷೆಗೊಳಪಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಹೈಕೋರ್ಟ್‌ನಲ್ಲಿ ಪಿಐಎಲ್‌ :

ಸಿ.ಡಿ. ಪ್ರಕರಣವನ್ನು ಸಿಬಿಐಗೆ ವಹಿಸಲು ಆಥವಾ ಕೇಂದ್ರ ಸರಕಾರದ ಅಧೀನದ ವಿಶೇಷ ತನಿಖಾ ತಂಡಕ್ಕೆ ನೀಡುವಂತೆ   ಕೋರಿ ವಕೀಲ ಎಸ್‌. ಉಮೇಶ್‌ ಅವರು ಹೈಕೊರ್ಟ್‌ಗೆ ಸಾರ್ವಜನಿ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಎಸ್‌ಐಟಿ ವಿರುದ್ಧ ದೂರು: ಜಗದೀಶ್‌ :

 ಬೆಂಗಳೂರು: ಎಸ್‌ಐಟಿ ಅಧಿಕಾರಿಗಳು ಪ್ರಕರಣದ ಆರೋಪಿಗಳಿಗೆ ನೆರವಾಗುತ್ತಿದ್ದು, ಈ ಸಂಬಂಧ  ತನಿಖಾಧಿಕಾರಿಗಳ ವಿರುದ್ಧ ಕೋರ್ಚಿಗೆ ದೂರು ನೀಡುವುದಾಗಿ ಸಂತ್ರಸ್ತೆ ಪರ ವಕೀಲ ಜಗದೀಶ್‌ ಹೇಳಿದ್ದಾರೆ.

ಈ ಕುರಿತು ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಉದ್ದೇಶಪೂರ್ವಕವಾಗಿ ಎಸ್‌ಐಟಿ ಅಧಿಕಾರಿಗಳು ಹಾಗೂ ಪೊಲೀಸರು ಸಂತ್ರಸ್ತೆ ವಿಚಾರಣೆಗೆ ಹಾಜರಾದ ವೀಡಿಯೋವನ್ನು ಮಾಧ್ಯಮಗಳಿಗೆ ಕೊಟ್ಟಿದ್ದಾರೆ. ತನಿಖಾ ಸಂಸ್ಥೆ ಆರೋಪಿ ಪರವಾಗಿ ಕೆಲಸ ಮಾಡುತ್ತಿದೆ.  ಮಂಗಳವಾರ ಸಂತ್ರಸ್ತೆ ವಿಶೇಷ ಕೋರ್ಟ್‌ ನಿಂದ ಹೊರಬರುವಾಗ ಮತ್ತು ಆಡುಗೋಡಿಯ ಎಸ್‌ಐಟಿ ಕೊಠಡಿಗೆ ಹೋಗುವ ಮೊದಲು ಹಿಂಬದಿಯಿಂದ ಆಕೆಯನ್ನು ಚಿತ್ರೀಕರಿಸಿ ಮಾಧ್ಯಮಗಳಿಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ತನ್ನ ವಿರುದ್ಧ  ಕೇಳಿ ಬಂದ ಆರೋಪ ಗಳಿಗೆ ಉತ್ತರಿಸಿರುವ ಜಗದೀಶ್‌, ಈ ಹಿಂದೆ ತಾನು ಭೂಗಳ್ಳರು, ಭ್ರಷ್ಟರ ವಿರುದ್ಧ ಹೋರಾಡಿದ್ದಕ್ಕೆ    ಸುಳ್ಳು ಕೇಸು ದಾಖಲಿಸಲಾಗಿತ್ತು. ತಾನು ಯಾವುದಕ್ಕೂ ಹೆದರುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.