ಸಚಿವ ಎ. ಮಂಜು ವಿರುದ್ಧ ದುರುದ್ದೇಶದಿಂದ ಎಫ್ಐಆರ್
Team Udayavani, Apr 7, 2018, 6:00 AM IST
ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸದಿದ್ದರೂ ದುರುದ್ದೇಶದಿಂದ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕೋಪಯೋಗಿ ಇಲಾಖೆಗೆ ಸೇರಿದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಿದ್ದು, ನೀತಿ ಸಂಹಿತೆ ಜಾರಿಯಾದ ಮಾ.27ರ ಸಂಜೆ 7.30ರ ವೇಳೆಗೆ ಲೋಕೋಪ ಯೋಗಿ ಇಲಾಖೆ ಅಧಿಕಾರಿಗಳು ಪ್ರವಾಸಿ ಮಂದಿರ ಹಾಗೂ ಪ್ರವಾಸಿ ಮಂದಿರದ ಕಟ್ಟಡದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದರು. ಅಂದೇ ಸಚಿವ ಎ.ಮಂಜು ಹಾಗೂ ಅವರ ಭಾವಚಿತ್ರ ಹಾಗೂ ಕಡತಗಳನ್ನೂ ಕಚೇರಿಯಿಂದ ಹೊರಕ್ಕೆ ಕೊಂಡೊಯ್ಯ ಲಾಗಿತ್ತು. ಚುನಾವಣೆ ಘೋಷಣೆಯಾದ ನಂತರ ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಪ್ರಮುಖ ಆಡಳಿತಾತ್ಮಕ ನಿರ್ಧಾರಗಳನ್ನು ಹೊರತುಪಡಿಸಿ ದೈನಂದಿನ ಕೆಲಸ ಮಾಡಲು ಅವಕಾಶ ವಿದೆ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಇಬ್ಬರು ಮಹಿಳಾ ಸಿಬ್ಬಂದಿ ಕೆಲಸ ಮಾಡುತ್ತಿದ್ದರು ಅಷ್ಟೇ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…