ಆಸಿಡ್ ದಾಳಿಗೆ ತುತ್ತಾದ ಯುವತಿ ಚಿಕಿತ್ಸೆಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಮುರುಗೇಶ್ ನಿರಾಣಿ
Team Udayavani, May 1, 2022, 5:32 PM IST
ಬೆಂಗಳೂರು: ದುಷ್ಟರ್ಮಿಯೊಬ್ಬನಿಂದ ಆಸಿಡ್ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ಥೆ ಯುವತಿಯ ವೈದ್ಯಕೀಯ ವೆಚ್ಚಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ವೈಯಕ್ತಿಕವಾಗಿ 1ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
ಮೊದಲ ಹಂತದಲ್ಲಿ ಯುವತಿಯ ವೈದ್ಯಕೀಯ ವೆಚ್ಚಕ್ಕೆ 1 ಲಕ್ಷ ಪರಿಹಾರವನ್ನು ವೈಯಕ್ತಿಕವಾಗಿ ನೀಡಲಾಗುವುದು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಅವರ ಕುಟುಂಬ ವರ್ಗದವರಿಗೆ ಆರ್ಥಿಕ ನೆರವು ನೀಡುವ ಆಶ್ವಾಸನೆಯನ್ನು ನಿರಾಣಿ ಅವರು ನೀಡಿದ್ದಾರೆ.
ಆಸಿಡ್ ದಾಳಿಗೆ ಒಳಗಾದ ಯುವತಿಯ ಕುಟುಂಬದವರು ಆರ್ಥಿಕವಾಗಿ ತುಂಬಾ ಸಂಕಷ್ಟದಲ್ಲಿದ್ದಾರೆ ಎಂಬುದನ್ನು ತಿಳಿದು ತುಂಬಾ ಬೇಸರವಾಯಿತು. ಹೀಗಾಗಿ ವೈದ್ಯಕೀಯ ನೆರವಿಗೆ ವೈಯುಕ್ತಿಕವಾಗಿ ನೆರವು ನೀಡುತ್ತಿದ್ದೇನೆಂದು ಹೇಳಿದ್ದಾರೆ.
ಅತಿ ಶೀಘ್ರದಲ್ಲೇ ಕುಟುಂಬದವರಿಗೆ ಚಕ್ ನೀಡಲಾಗುವುದು. ಸರ್ಕಾರದಿಂದಲೂ ನೆರವು ಕೊಡಿಸಲು ಎಲ್ಲಾ ರೀತಿಯಲ್ಲೂ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ.
ಇದು ಅತ್ಯಂತ ಹೇಯ ಕೃತ್ಯ :
ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ಅಮಾನವೀಯ ಘಟನೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಇದೊಂದು ಅತ್ಯಂತ ಹೇಯ ಕೃತ್ಯ ಎಂದು ನಿರಾಣಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದರೆ ಈ ದುಷ್ಕತ್ಯ ಎಸಗುವವರಿಗೆ ಕಠಿಣವಾದ ಕಾನೂನು ಕ್ರಮ ಜರುಗಿಸಬೇಕು. ಇದರಿಂದ ಮುಂದಿನವರಿಗೂ ಎಚ್ಚರಿಕೆಯ ಪಾಠವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಎಷ್ಟು ಸಾಧ್ಯವೋ ಅದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು. ತಪ್ಪಿತಸ್ಥರು ಯಾರೇ ಇದ್ದರೂ ಸರ್ಕಾರ ಖಂಡಿತವಾಗಿಯೂ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಿದೆ ಎಂದು ಸಚಿವ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ಮಶಾನ ಜಾಗಗಳ ಒತ್ತುವರಿ ತೆರವುಗೊಳಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಶಿಕ್ಷಕ ಪರೀಕ್ಷೆ: ಫಲಿತಾಂಶ ಪ್ರಕಟ: 54,342 ಮಂದಿ ತೇರ್ಗಡೆ
ಗುರುವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
ಮೋದಿ ಭದ್ರತೆಗೆ ಮುಧೋಳ ಶ್ವಾನ: ಸೇನೆ-ಎನ್ಎಸ್ಜಿ ಪಡೆಗೂ ಆಯ್ಕೆಯಾಗಿದ್ದ ವಿಶಿಷ್ಟ ತಳಿ
ಬಿಎಸ್ವೈಗೆ ಮಣೆ: ಲಿಂಗಾಯಿತ ಮತಬ್ಯಾಂಕ್ ಮೇಲೆ ಕಣ್ಣಿಟ್ಟು ಕಾರ್ಯತಂತ್ರ
MUST WATCH
ಹೊಸ ಸೇರ್ಪಡೆ
ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು
ಫಾಝಿಲ್ ಹತ್ಯೆ ಪ್ರಕರಣ : ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದಾತ ಪೊಲೀಸರ ವಶಕ್ಕೆ
ವಿವೋ ವಿ25 ಪ್ರೋ ಫೋನ್ ಬಿಡುಗಡೆ; ಕಲರ್ ಚೇಂಜ್ ಮಾಡಿಕೊಳ್ಳುವ ಫೋನ್