ಸಚಿವ ಹೆಗಡೆ ರಕ್ಷಣೆಗೆ ನಿಂತಕೇಂದ್ರ ಸರ್ಕಾರ: ಆರೋಪ

Team Udayavani, Dec 28, 2017, 9:19 AM IST

ಬೆಂಗಳೂರು: ವಿವಾದಾತ್ಮ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆಯನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಆರೋಪಿಸಿದ್ದಾರೆ. 

ಈ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿಕೆ ನೀಡಿದ್ದು, ತಕ್ಷಣವೇ ಅವರನ್ನು ಸಂಪುಟದಿಂದ ಕೈ ಬಿಟ್ಟು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಕೊಪ್ಪಳದಲ್ಲಿ ನಡೆದ ಬ್ರಾಹ್ಮಣ ಯುವ ಪರಿಷತ್‌ ಸಭೆಯಲ್ಲಿ ಜಾತ್ಯತೀತ ವ್ಯಕ್ತಿಗಳಿಗೆ ತಂದೆ ತಾಯಿ ಯಾರೆಂದು ಗೊತ್ತಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು ಖಂಡನೀಯ. ಪ್ರಧಾನಿ ಮತ್ತು ಕೇಂದ್ರ ಸರ್ಕಾರ ಅನಂತಕುಮಾರ್‌ ಹೆಗಡೆಯನ್ನು ರಕ್ಷಿಸಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಮೀಸಲಾತಿ ಹಾಗೂ ದಲಿತ ವಿರೋಧಿ ಹೇಳಿಕೆ ನೀಡಿದವರ ಬಗ್ಗೆ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ವೇಣುಗೋಪಾಲ ಆಗ್ರಹಿಸಿದ್ದಾರೆ.

ಸಚಿವ ಹೆಗಡೆ ವಿರುದ್ಧ ದೂರು
ಸಾಗರ: ಸಂವಿಧಾನ, ಹಾಗೂ ಜಾತ್ಯತೀತ ಪದವನ್ನು ಲೇವಡಿ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಮ್ಮ ದೇಶದ ಸಂವಿಧಾನದಲ್ಲಿ ಉಲ್ಲೇಖೀಸಿದ ಜಾತ್ಯತೀತ ಎನ್ನುವ ಪದ ಬಳಕೆ ಮಾಡುವ ಭರದಲ್ಲಿ ಸಚಿವರು ಲೇವಡಿ ಮಾಡಿದ್ದಾರೆ. ಹೀಗಾಗಿ ಸಚಿವರ ವಿರುದ್ಧ
ಒಳಸಂಚು ಹಾಗೂ ದೇಶದ್ರೋಹಿ ಕೃತ್ಯದಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ಶಿವಾನಂದ ವಿನಂತಿಸಿದ್ದಾರೆ. ಆದರೆ ಈವರೆಗೂ ಸಚಿವರ ವಿರುದ್ಧ ಪ್ರಕರಣ ದಾಖಲಾಗಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ