ಆ್ಯಸಿಡ್ ದಾಳಿ ಸಂತ್ರಸ್ತೆ ಭೇಟಿಯಾದ ಸಚಿವ ಸುಧಾಕರ್: ವೈಯಕ್ತಿಕ 5 ಲಕ್ಷ ರೂ. ಸಹಾಯ

ಅಮಾನುಷ ಕೃತ್ಯ ಎಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ಖಚಿತ

Team Udayavani, Apr 30, 2022, 4:35 PM IST

1-fdsfsd

ಬೆಂಗಳೂರು : ಬೆಂಗಳೂರಿನ ಸುಂಕದಕಟ್ಟೆ ಬಳಿ ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತ ಯುವತಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ 5 ಲಕ್ಷ ರೂಪಾಯಿಗಳ ವೈಯಕ್ತಿಕ ಧನ ಸಹಾಯ ನೀಡಿದ್ದಾರೆ. ಅಮಾನುಷ ಕೃತ್ಯವೆಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆಯನ್ನು ನೀಡಿದ್ದಾರೆ.

ಸೇಂಟ್ ಜಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿ ಮಾಡಿ, ನಂತರ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಕುಟುಂಬಸ್ಥರು ಮಾನಸಿಕ ಧೈರ್ಯ ತಂದುಕೊಳ್ಳಬೇಕು. ಸರ್ಕಾರ ಸಂತ್ರಸ್ಥೆಯ ಜೊತೆ ಇರಲಿದೆ. ಎಲ್ಲಾ ರೀತಿಯ ಚಿಕಿತ್ಸೆಗಳನ್ನು ಸರ್ಕಾರ ನೀಡಲಿದೆ ಎಂದು ಹೇಳಿದರು.

ಸಂತ್ರಸ್ಥೆಯ ಜೊತೆ ಸರ್ಕಾರ, ಆರೋಗ್ಯ ಇಲಾಖೆ ಇರಲಿದೆ. ಯುವತಿಯ ಪೋಷಕರ ನೋವು ಸರ್ಕಾರಕ್ಕೆ ಅರ್ಥವಾಗುತ್ತದೆ. ಘಟನೆಯ ವಿಷಯ ತಿಳಿದು ಅತೀವ ದು:ಖವಾಗಿದೆ. ಇದು ನಾಗರೀಕ ಸಮಾಜ ತಲೆತಗ್ಗಿಸುವ ಘಟನೆ. ಮಹಾ ಕ್ರೌರ್ಯವನ್ನು ಒಬ್ಬ ವ್ಯಕ್ತಿ ಹೇಗೆ ಮಾಡುತ್ತಾನೆ ಅನ್ನುವುದು ಅರಗಿಸಿಕೊಳ್ಳಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಿದೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಮೂಲಕ ಈ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ಆದಷ್ಟು ಶೀಘ್ರದಲ್ಲಿ ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸುವ ಮೂಲಕ ಸಮಾಜ ಘಾತುಕರಿಗೆ ಎಚ್ಚರಿಕೆಯ ಸಂದೇಶ ನೀಡುವ ಅಗತ್ಯವಿದೆ ಎಂದರು.

‘ಸೆಂಟ್ ಜಾನ್ ಆಸ್ಪತ್ರೆಯ ಜೊತೆ ಬೆಂಗಳೂರು ಮೆಡಿಕಲ್ ಕಾಲೇಜು ಕೂಡ ಯುವತಿಯ ಶಸ್ತ್ರ ಚಿಕಿತ್ಸೆಗೆ ನೆರವು ನೀಡಲಿದೆ. ಸಂತ್ರಸ್ತ ಯುವತಿಗೆ ಶೇ.35% ಸುಟ್ಟ ಗಾಯಗಳಾಗಿದ್ದು ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಯುವತಿಗೆ ಅಗತ್ಯವಿರುವ ಚರ್ಮ ಕಸಿ ಸೇರಿದಂತೆ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ನಾನು ವೈಯಕ್ತಿಕವಾಗಿ 5 ಲಕ್ಷ ರೂ. ಸಹಾಯಧನ ನೀಡಲು ನಿರ್ಧರಿಸಿದ್ದೇನೆ. ಯುವತಿಯ ಚಿಕಿತ್ಸೆ ಅಷ್ಟೇ ಅಲ್ಲದೆ ಆಕೆಯ ಮುಂದಿನ ಭವಿಷ್ಯಕ್ಕೆ ನೆರವಾಗಲು ಉದ್ಯೋಗ ಸೇರಿದಂತೆ ಎಲ್ಲ ರೀತಿಯ ಪುನರ್ವಸತಿ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ರೀತಿಯ ಅಮಾನವೀಯ ದುಷ್ಕೃತ್ಯಗಳು ಮರುಕಳಿಸದಂತೆ ವಿಕೃತ ಮನಸ್ಸುಗಳಿಗೆ ಕಡಿವಾಣ ಹಾಕಿ, ಯುವತಿಯರಿಗೆ ಸುರಕ್ಷಿತ ಸಮಾಜ ನಿರ್ಮಿಸುವತ್ತ ಇಡೀ ಸಮಾಜ ಕಾರ್ಯೋನ್ಮುಖವಾಗಬೇಕಿದೆ ಎಂದು ಹೇಳಿದರು.

ಜೆಡಿಎಸ್ ಪಕ್ಷದ ವತಿಯಿಂದ 1 ಲಕ್ಷ ರೂ ನೆರವು

ಯುವತಿಯ ಕುಟುಂಬಕ್ಕೆ ಜೆಡಿಎಸ್ ಪಕ್ಷದವತಿಯಿಂದ 1 ಲಕ್ಷ ರೂ ನೆರವು ನೀಡಲಾಗಿದೆ. ಜೆಡಿಎಸ್ ನಾಯಕ ಶರವಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಚೆಕ್ ನೀಡಿ ಪೋಷಕರಿಗೆ ಧೈರ್ಯ ತುಂಬಿದರು.

ಟಾಪ್ ನ್ಯೂಸ್

ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡಿ, ಇಲ್ಲದಿದ್ರೆ ಆಕ್ರೋಶ ಎದುರಿಸಿ: ಜಯಮೃತ್ಯುಂಜಯಶ್ರೀ

ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡಿ, ಇಲ್ಲದಿದ್ರೆ ಆಕ್ರೋಶ ಎದುರಿಸಿ: ಜಯಮೃತ್ಯುಂಜಯಶ್ರೀ

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

tdy-15

ಹಳೆ ಚಿನ್ನವನ್ನು ಬದಲಾಯಿಸುವ ನೆಪದಲ್ಲಿ ನಕಲಿ ಚಿನ್ನಾಭರಣ ಕೊಟ್ಟು ವಂಚನೆ: ಇಬ್ಬರ ಬಂಧನ

ಐದು ದಶಕಗಳಿಂದ ಪಂಪಾಸರೋವರದ ಅರ್ಚಕರಾಗಿದ್ದ ರಾಮಾದಾಸ ಬಾಬಾ ವಿಧಿವಶ

ಐದು ದಶಕಗಳಿಂದ ಪಂಪಾಸರೋವರದ ಅರ್ಚಕರಾಗಿದ್ದ ರಾಮಾದಾಸ ಬಾಬಾ ವಿಧಿವಶ

ಮೋದಿ ಸರಕಾರದ ಅವಧಿಯಲ್ಲಿ ಕೇಂದ್ರ ಮಟ್ಟದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ

ಮೋದಿ ಸರಕಾರದ ಅವಧಿಯಲ್ಲಿ ಕೇಂದ್ರ ಮಟ್ಟದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ

ಆಮಿರ್‌,ಹೃತಿಕ್‌ ಆಯಿತು ಈಗ ಶಾರುಖ್‌ ʼಪಠಾಣ್‌ʼಗೂ ತಟ್ಟಿತು ಬಾಯ್‌ ಕಾಟ್ ಬಿಸಿ

ಆಮಿರ್‌, ಹೃತಿಕ್‌ ಆಯ್ತು ಈಗ ಶಾರುಖ್‌ ಖಾನ್ ʼಪಠಾಣ್‌ʼಗೂ ತಟ್ಟಿತು boycott ಬಿಸಿ

ಸಿದ್ದರಾಮಯ್ಯ ಸಿಎಂ ಆಗಲೆಂದು ಆಸೆ ಪಡುವವರಲ್ಲಿ ನಾನೂ ಒಬ್ಬ: ಸಚಿವ ರಾಮುಲು

ಸಿದ್ದರಾಮಯ್ಯ ಸಿಎಂ ಆಗಲೆಂದು ಆಸೆ ಪಡುವವರಲ್ಲಿ ನಾನೂ ಒಬ್ಬ: ಸಚಿವ ರಾಮುಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡಿ, ಇಲ್ಲದಿದ್ರೆ ಆಕ್ರೋಶ ಎದುರಿಸಿ: ಜಯಮೃತ್ಯುಂಜಯಶ್ರೀ

ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡಿ, ಇಲ್ಲದಿದ್ರೆ ಆಕ್ರೋಶ ಎದುರಿಸಿ: ಜಯಮೃತ್ಯುಂಜಯಶ್ರೀ

mb-patil

ಆ.19 ರಿಂದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ರಾಜ್ಯ ಪ್ರವಾಸ

ಸಿದ್ದರಾಮಯ್ಯ ಸಿಎಂ ಆಗಲೆಂದು ಆಸೆ ಪಡುವವರಲ್ಲಿ ನಾನೂ ಒಬ್ಬ: ಸಚಿವ ರಾಮುಲು

ಸಿದ್ದರಾಮಯ್ಯ ಸಿಎಂ ಆಗಲೆಂದು ಆಸೆ ಪಡುವವರಲ್ಲಿ ನಾನೂ ಒಬ್ಬ: ಸಚಿವ ರಾಮುಲು

ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಉದ್ಯೋಗದಲ್ಲೂ ಶೇ.2 ಮೀಸಲು: ಸಿಎಂ ಬೊಮ್ಮಾಯಿ

ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಉದ್ಯೋಗದಲ್ಲೂ ಶೇ.2 ಮೀಸಲು: ಸಿಎಂ ಬೊಮ್ಮಾಯಿ

ಕೊಳ್ಳೇಗಾಲ : ನಾಲೆಯಲ್ಲಿ ಈಜಲು ಹೋಗಿ ಇಬ್ಬರು ಸಾವು, ದೇವರ ಹರಕೆ ಪೂಜೆಗೆ ಬಂದವರು ನಿರುಪಾಲು

ನಾಲೆಯಲ್ಲಿ ಈಜಲು ಹೋಗಿ ಇಬ್ಬರು ನೀರುಪಾಲು, ದೇವರ ಹರಕೆ ಪೂಜೆಗೆಂದು ಬಂದವರು ಮಸಣ ಸೇರಿದರು

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಆಳವಾದ ಕಂದಕಕ್ಕೆ ಬಸ್ ಉರುಳಿ ಬಿದ್ದು, ಐಟಿಬಿಪಿಯ 6 ಯೋಧರು ಸಾವು

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

ಹೊಸ ಸೇರ್ಪಡೆ

ಬಲಿಷ್ಠ ಭಾರತದಿಂದ ಶತ್ರು ರಾಷ್ಟ್ರಗಳಿಗೆ ನಡುಕ; ಸಚಿವ ಬಿ.ಸಿ. ಪಾಟೀಲ್‌

ಬಲಿಷ್ಠ ಭಾರತದಿಂದ ಶತ್ರು ರಾಷ್ಟ್ರಗಳಿಗೆ ನಡುಕ; ಸಚಿವ ಬಿ.ಸಿ. ಪಾಟೀಲ್‌

ಸ್ವಾತಂತ್ರ್ಯ ಹೋರಾಟಗಾರರ ಬಲಿದಾನ ನೆನಪಿಸಿಕೊಳ್ಳಿ

ಸ್ವಾತಂತ್ರ್ಯ ಹೋರಾಟಗಾರರ ಬಲಿದಾನ ನೆನಪಿಸಿಕೊಳ್ಳಿ

ಹೋರಾಟಗಾರರ ತ್ಯಾಗ ಅವಿಸ್ಮರಣೀಯ

ಹೋರಾಟಗಾರರ ತ್ಯಾಗ ಅವಿಸ್ಮರಣೀಯ

15-river

ನದಿ ಪಾತ್ರದ ಜನ ಜಾಗರೂಕರಾಗಿ

ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡಿ, ಇಲ್ಲದಿದ್ರೆ ಆಕ್ರೋಶ ಎದುರಿಸಿ: ಜಯಮೃತ್ಯುಂಜಯಶ್ರೀ

ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡಿ, ಇಲ್ಲದಿದ್ರೆ ಆಕ್ರೋಶ ಎದುರಿಸಿ: ಜಯಮೃತ್ಯುಂಜಯಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.