ಸಚಿವರಿಗೆ ಜನರ ಸಂಕಷ್ಟ ಪರಿಹಾರವಾಗಬೇಕಿಲ್ಲ, ವಿಜಯೋತ್ಸವಗಳು ಬೇಕು: ಕುಮಾರಸ್ವಾಮಿ ಕಿಡಿ


Team Udayavani, Aug 9, 2021, 9:43 AM IST

hdk

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೋವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಛಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹಾರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆ ಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು ಎಂದಿದ್ದಾರೆ.

ಇದನ್ನೂ ಓದಿ:ಅಂದು ಬಂಗಾರಪ್ಪ; ಇಂದು ಆರಗರಿಗೆ ಗೃಹ ಖಾತೆ ಅದೃಷ್ಟ!

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಲ್ಲ. ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.