ಶಾಸಕ ಖಾದರ್ ವಿರುದ್ಧ ಕ್ರಮಕ್ಕೆ ದೂರು
Team Udayavani, Dec 25, 2019, 3:05 AM IST
ಬಂಟ್ವಾಳ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯಕ್ಕೆ ಬೆಂಕಿ ಹಚ್ಚುವ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದ ಶಾಂತಿ ಕೆಡಿಸಿರುವ ಶಾಸಕ ಯು.ಟಿ.ಖಾದರ್ರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಂಟ್ವಾಳ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದೆ.
ಶಾಸಕರ ಹೇಳಿಕೆಯಿಂದಾಗಿ ಕಿಡಿಗೇಡಿಗಳು ಪ್ರತಿಭಟನೆ ನೆಪದಲ್ಲಿ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ. ಪೊಲೀಸ್ ಇಲಾಖೆಗೂ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಅಪಾರ ಪ್ರಮಾಣದಲ್ಲಿ ಸಾರ್ವಜನಿಕ ಸೊತ್ತುಗಳಿಗೆ ಹಾನಿಯಾಗಿದೆ. ಹೀಗಾಗಿ ಶಾಸಕ ಯು.ಟಿ.ಖಾದರ್ರನ್ನು ಬಂಧಿಸಿ, ಗಲಭೆಗೆ ಸಂಬಂಧಿಸಿದಂತೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಜತೆಗೆ ಗಲಭೆಯಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ 10 ಲಕ್ಷ ರೂ.ಪರಿಹಾರ ಘೋಷಣೆ ಮಾಡಿ ರುವುದು ಸರಿಯಲ್ಲ. ಇದರ ಪುನರ್ ವಿಮರ್ಶೆ ನಡೆಸಬೇಕು ಎಂದೂ ವೇದಿಕೆ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ