Udayavni Special

ಶಾಸಕ ವಿಶ್ವನಾಥ್ ಅವರ ಆರೋಪಗಳು ಸತ್ಯಕ್ಕೆ ದೂರ : ಸರ್ಕಾರದ ಸ್ಪಷ್ಟನೆ

Team Udayavani, Jun 18, 2021, 5:31 PM IST

eರತಯತರೆತಯುಹಗ್ಎಡೆರತಯಹ

ಬೆಂಗಳೂರು : ರಾಜ್ಯದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಎಲ್ಲಾ ಟೆಂಡರ್ ಪ್ರಕ್ರಿಯೆಗಳನ್ನು ಅತ್ಯಂತ ಪಾರದರ್ಶಕ ರೀತಿಯಲ್ಲಿ ನಡೆಸಲಾಗಿದೆ. ಅಲ್ಲದೆ, ಯಾವುದೇ ಅಕ್ರಮಗಳು ನಡೆದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಶಾಸಕ ಹೆಚ್. ವಿಶ್ವನಾಥ್ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಅವರು, ಭದ್ರಾ ಮೇಲ್ದಂಡೆ ಮತ್ತು ಕಾವೇರಿ ನೀರಾವರಿ ಯೋಜನೆಗಳಿಗೆ ಆರ್ಥಿಕ ಇಲಾಖೆಯ ಸಹಮತಿ ಹಾಗೂ ಸಮ್ಮತಿ ಇಲ್ಲದೆಯೇ 20 ಸಾವಿರ ಕೋಟಿ ರೂ. ಟೆಂಡರ್ ಆಹ್ವಾನಿಸಿರುವುದಾಗಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 21,473.67 ಕೋಟಿ ರೂ ಮೊತ್ತದ ಸಮಗ್ರ ಪರಿಷ್ಕøತ ಯೋಜನಾ ವರದಿಯ ಶಿಫಾರಸ್ಸಿನ ಅನ್ವಯ ಸರ್ಕಾರವು ದಿನಾಂಕ : 16-12-2020 ರಂದು ಆರ್ಥಿಕ ಇಲಾಖೆ ಸಹಮತಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಅಂತೆಯೇ, ದಿನಾಂಕ : 24-12-2020 ರಂದು ನಡೆದ ಕೇಂದ್ರ ಜಲಶಕ್ತಿ ಮಂತ್ರಾಲಯದ ತಾಂತ್ರಿಕ ಸಲಹಾ ಸಮಿತಿಯಲ್ಲಿ ಈ ಯೋಜನೆಗೆ 16125.48 ಕೋಟಿ ರೂ. ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ ಬರಪೀಡಿತ ಮಧ್ಯ ಕರ್ನಾಟಕದ ಬವಣೆ ನೀಗಿಸುವ ಉದ್ದೇಶ ಹೊಂದಲಾಗಿದೆ. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ದಿನಾಂಕ : 25-03-2021 ರಂದು ನಡೆದ ಸಭೆಯಲ್ಲಿ ಈ ಕಡತವನ್ನು ಕೇಂದ್ರ ಸರ್ಕಾರದ ಹೂಡಿಕೆ ತೀರುವಳಿ ಮಂಡಳಿ ( ಇನ್‍ವೆಸ್ಟ್‍ಮೆಂಟ್ ಕ್ಲಿಯರೆನ್ಸ್ ಬೋರ್ಡ್ ) ಗೆ ನೀಡಲಾಗಿದೆ. ಪ್ರಸ್ತುತ ಉನ್ನತಾಧಿಕಾರ ಸಮಿತಿಯ ಮುಂದೆ ತಿರುವಳಿಗಾಗಿ ಪ್ರಸ್ತಾವನೆ ಸಲ್ಲಿಕೆ ಹಂತದಲ್ಲಿ ಇದೆ ಎಂದು ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಲಕ್ಷ್ಮಣ್ ರಾವ್ ಪೇಶ್ವೆ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಯೋಜನೆಗೆ ಸಂಬಂಧಿಸಿದಂತೆ ದಿನಾಂಕ : 02-12-2020 ರಲ್ಲಿ ನಡೆದ ನಿರ್ದೇಶಕ ಮಂಡಳಿಯ 16 ನೇ ಸಭೆಯಲ್ಲಿ ಮಂಜೂರಾತಿ ಪಡೆಯಲಾಗಿದೆ. ಅಲ್ಲದೆ, 21,473 ಕೋಟಿ ರೂ. ಯೋಜನೆಗೆ ಸರ್ಕಾರದಲ್ಲಿ ಅನುದಾನವಿಲ್ಲ ಎಂಬ ಆರೋಪಕ್ಕೂ ಪ್ರತಿಕ್ರಿಯಿಸಿರುವ ಅವರು ಈ ಯೋಜನೆಯು ಆರ್ಥಿಕ ಇಲಾಖೆಯ ಸಹಮತಿ ಮತ್ತು ಸಮ್ಮತಿಯೊಂದಿಗೆ ಅನುಮೋದಿತವಾಗಿದೆ. ಈ ಯೋಜನೆಯ ಜಾರಿಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಯೋಜನೆಯಡಿ 16,125.4 ಕೋಟಿ ರೂ. ಗಳನ್ನು ಭರಿಸಲಿದೆ. ಈ ಯೋಜನೆಯನ್ನು 2023-24 ರೊಳಗೆ ಪೂರ್ಣಗೊಳಿಸುವ ಷರತ್ತಿನೊಂದಿಗೆ ಕೇಂದ್ರ ಸರ್ಕಾರವು ಅನುದಾನ ಮಂಜೂರು ಮಾಡಿದೆ ಹೀಗಾಗಿ ಈ ಯೋಜನೆಯ ಜಾರಿಗೆ ಆರ್ಥಿಕ ಸಂಪನ್ಮೂಲದ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಪ್ಪತ್ತು ಸಾವಿರ ಕೋಟಿ ರೂ. ಟೆಂಡರ್ ಕರೆದಿದ್ದು ಇದಕ್ಕೆ ಅನುಮತಿ ಇಲ್ಲ ಎಂಬ ಆರೋಪಕ್ಕೆ ಉತ್ತರಿಸಿರುವ ಶ್ರೀ ಲಕ್ಷ್ಮಣ ರಾವ್ ಪೇಶ್ವೆ ಅವರು ದಿನಾಂಕ : 25-03-2021 ರಂದು ಜರುಗಿದ ಸಭೆಯಲ್ಲಿ ಕೇಂದ್ರ ಸರ್ಕಾರದ ಷರತ್ತುಗಳಿಗೆ ಒಳಪಟ್ಟು ಅನುಮೋದನೆ ನೀಡಲಾಗಿದೆ. ಎಲ್ಲಾ ಕಾಮಗಾರಿಗಳನ್ನು 2023-24 ನೇ ಸಾಲಿನ ಒಳಗೆ ಪೂರ್ಣ ಗೊಳಿಸಬೇಕಿರುವುದರಿಂದ ಡ್ರಿಪ್ ಕಾಮಗಾರಿ ಅಂದಾಜು ಪಟ್ಟಿಗಳನ್ನು ಡ್ರಿಪ್ ಸಮಿತಿಯ ಐದು ಸಭೆಗಳಲ್ಲಿ ಸವಿವರವಾಗಿ ಚರ್ಚಿಸಿ ಹಾಗೂ ನಿಗಮದ ಅಂದಾಜು ಪರಿಶೀಲನಾ ಸಮಿತಿಯಿಂದ ಅನುಮತಿ ಪಡೆದು ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿನ ಖರೀದಿಗಳಲ್ಲಿ ಪಾರದರ್ಶಕತಾ ಅಧಿನಿಯಮದಲ್ಲಿನ ನಿಯಮಾನುಸಾರ 4026.60 ಕೋಟಿ ಮೊತ್ತಕ್ಕೆ ಏಳು ಪ್ಯಾಕೇಜ್‍ಗಳಲ್ಲಿ ಟೆಂಡರ್ ಆಹ್ವಾನಿಸಲಾಗಿದೆ. ಇದು ಪ್ರಕ್ರಿಯೆಯ ವಿವಿಧ ಹಂತಗಳಲಿವೆ. ಕೋವಿಡ್-19 ರ ಹಿನ್ನೆಲೆಯಲ್ಲಿ ಕಳೆದ ವರ್ಷ ಟೆಂಡರ್ ಪ್ರಕ್ರಿಯೆ ಮಾಡಲಾಗಿಲ್ಲ ಹೀಗಾಗಿ ಪ್ರಸ್ತುತ ಟೆಂಡರ್ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ ಈ ಯೋಜನೆಯ ಜಾರಿಗೆ ಸಚಿವ ಸಂಪುಟದ ಅನುಮೋದನೆಯನ್ನು ಪಡೆಯಲಾಗಿದೆ. ಎಂದು ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಲಕ್ಷ್ಮಣ್ ರಾವ್ ಪೇಶ್ವೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

14

ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

halapp-acgar

ವಿಜಯಪುರ: ಭೂಕಂಪದ ಆತಂಕ ಬೇಡವೆಂದ ಸಚಿವ ಹಾಲಪ್ಪ ಆಚಾರ್

70

ಮಂಡ್ಯ ಮೈಶುಗರ್ ಕಾರ್ಖಾನೆ ಪುನಶ್ಚೇತನ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಗಂಗಾವತಿ: ಸಾಣಾಪುರ್ ಲೇಕ್; ಜಂಪಿಂಗ್ ಮಾಡಲು ಹೋಗಿ ಇಬ್ಬರು ಐಟಿ ಉದ್ಯೋಗಿಗಳು ನೀರು ಪಾಲು

ಗಂಗಾವತಿ: ಸಾಣಾಪುರ್ ಲೇಕ್; ಜಂಪಿಂಗ್ ಮಾಡಲು ಹೋಗಿ ಇಬ್ಬರು ಐಟಿ ಉದ್ಯೋಗಿಗಳು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

70

ಮಂಡ್ಯ ಮೈಶುಗರ್ ಕಾರ್ಖಾನೆ ಪುನಶ್ಚೇತನ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

1-2-a

ಬೆಂಗಳೂರು ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

MUST WATCH

udayavani youtube

ವಿಶೇಷ ಚೇತನ ಅಭಿಮಾನಿಯೊಬ್ಬನನ್ನು ಕಾಣಲು ಬಂದ ರಿಯಲ್ ಸ್ಟಾರ್ ಉಪೇಂದ್ರ!

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

ಹೊಸ ಸೇರ್ಪಡೆ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

14

ಅಧಿಕಾರ ದುರುಪಯೋಗ: ಎಫ್ಐಆರ್‌

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

14

ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

Untitled-1

ವೀರರಾಣಿ ಚನ್ನಮ್ಮನ ಕಿತ್ತೂರ್ ಉತ್ಸವದ ವೀರಜ್ಯೋತಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.