ಚುನಾವಣಾ ವೇಳಾಪಟ್ಟಿಗೆ ಮುನ್ನ ನಾಲ್ಕು ಬಾರಿ ರಾಜ್ಯಕ್ಕೆ ಮೋದಿ
Team Udayavani, Feb 7, 2018, 6:00 AM IST
ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಕಳೆದ ಭಾನುವಾರ ಬೆಂಗಳೂರಿಗೆ ಬಂದು ರಾಜಕೀಯ ಬಿರುಗಾಳಿ ಎಬ್ಬಿಸಿ ಹೋಗಿದ್ದ
ಪ್ರಧಾನಿ ನರೇಂದ್ರ ಮೋದಿ ಮುಂಬರುವ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುವ ಮುನ್ನ ಮತ್ತೆ ನಾಲ್ಕು ಬಾರಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಫೆ. 27ರಂದು ದಾವಣಗೆರೆಗೆ ಬರಲಿದ್ದು, ರೈತ ಮಿತ್ರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಕಲಬುರಗಿ, ರಾಯಚೂರು ಮತ್ತು ಮೈಸೂರು ಭಾಗದಲ್ಲಿ ನಡೆಯಲಿರುವ ಪಕ್ಷದ ವಿವಿಧ ಸಮಾವೇಶಗಳಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ. ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುವ ಮುನ್ನವೇ ಈ ಎಲ್ಲಾ ಸಮಾವೇಶಗಳು ನಡೆಯಲಿವೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ಕರ್ನಾಟಕದತ್ತ ಗಮನ ಕೇಂದ್ರೀಕರಿಸಲಿದ್ದು, ಚುನಾವಣಾ ವೇಳಾಪಟ್ಟಿ ಪ್ರಕಟವಾದ ಬಳಿಕವೂ ಸಾಕಷ್ಟು ಕಡೆ ಪ್ರಚಾರಸಭೆಗಳನ್ನು
ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿಎಸ್‌ವೈ ಜನ್ಮದಿನ: ಫೆ. 27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನವಾಗಿದ್ದು, ಅಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ದಾವಣಗೆರೆಯಲ್ಲಿ ರೈತಮಿತ್ರ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದ ಮೂಲಕ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಶ್ರದಾಟಛಿಂಜಲಿ ಸಲ್ಲಿಸುವುದರ ಜತೆಗೆ ರೈತರನ್ನು ಬಿಜೆಪಿ ಪರವಾಗಿ ಒಟ್ಟುಗೂಡಿಸುವ ಕೆಲಸವೂ ನಡೆಯಲಿದೆ. ಪ್ರಧಾನಿ ಮೋದಿ ಅವರೇ ಇದರ ನೇತೃತ್ವ ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ಮಶಾನ ಜಾಗಗಳ ಒತ್ತುವರಿ ತೆರವುಗೊಳಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಶಿಕ್ಷಕ ಪರೀಕ್ಷೆ: ಫಲಿತಾಂಶ ಪ್ರಕಟ: 54,342 ಮಂದಿ ತೇರ್ಗಡೆ
ಗುರುವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
ಮೋದಿ ಭದ್ರತೆಗೆ ಮುಧೋಳ ಶ್ವಾನ: ಸೇನೆ-ಎನ್ಎಸ್ಜಿ ಪಡೆಗೂ ಆಯ್ಕೆಯಾಗಿದ್ದ ವಿಶಿಷ್ಟ ತಳಿ
ಬಿಎಸ್ವೈಗೆ ಮಣೆ: ಲಿಂಗಾಯಿತ ಮತಬ್ಯಾಂಕ್ ಮೇಲೆ ಕಣ್ಣಿಟ್ಟು ಕಾರ್ಯತಂತ್ರ
MUST WATCH
ಹೊಸ ಸೇರ್ಪಡೆ
ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು
ಫಾಝಿಲ್ ಹತ್ಯೆ ಪ್ರಕರಣ : ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದಾತ ಪೊಲೀಸರ ವಶಕ್ಕೆ
ವಿವೋ ವಿ25 ಪ್ರೋ ಫೋನ್ ಬಿಡುಗಡೆ; ಕಲರ್ ಚೇಂಜ್ ಮಾಡಿಕೊಳ್ಳುವ ಫೋನ್