45 ವರ್ಷಕ್ಕಿಂತ ಕೆಳಗಿನವರಿಗೂ ಲಸಿಕೆ ಹಾಕಿ : ಮೋದಿ
Team Udayavani, Apr 8, 2021, 7:29 PM IST
ಬೆಂಗಳೂರು : ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದರು. ವಿಡಿಯೊ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಪರಿಸ್ಥಿತಿ ಅವಲೋಕಿಸಿ, ಸಿಎಂಗಳ ಅಭಿಪ್ರಾಯ ಪಡೆದಿದ್ದಾರೆ.
ಈ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಕೆ ಸೂಧಾಕರ್ ಕೂಡ ಭಾಗಿಯಾಗಿದ್ದರು. ಇನ್ನು ಈ ಸಭೆ ಮುಗಿದ ಬಳಿಕ ಅಂದ್ರೆ ಸಂಜೆ 7.30ಕ್ಕೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸಿಎಂಗಳ ಜೊತೆ ಸಭೆಯಲ್ಲಿ ಮಾತನಾಡಿದ ಮೋದಿ ಮೊದಲು 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಕೊಡಬೇಕು. ಇವರಿಗೆಲ್ಲ ಲಸಿಕೆ ಹಾಕಿದ ನಂತರ 45 ವರ್ಷ ಕೆಳಗಿನವರಿಗೂ ಲಸಿಕೆ ನೀಡುವಂತೆ ಸೂಚನೆ ನೀಡಿದ್ದಾರೆ.