ಲಾಕ್ ಡೌನ್: ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ
Team Udayavani, Apr 27, 2020, 11:27 AM IST
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್-19 ಲಾಕ್ ಡೌನ್ ಕುರಿತಂತೆ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ್ದು, ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಶ್ರೀ ರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್ ಉಪಸ್ಥಿತರಿದ್ದರು.
ಕೋವಿಡ್-19 ನಿಯಂತ್ರಣ ಹಾಗೂ ರಾಜ್ಯಗಳಲ್ಲಿನ ಸ್ಥಿತಿಗತಿಗಳ ಬಗ್ಗೆ ಪ್ರಧಾನಿ ಮೋದಿಯವರು ಮುಖ್ಯಮಂತ್ರಿ ಗಳಿಂದ ಮಾಹಿತಿ ಪಡೆದರು.
ಇದಕ್ಜೂ ಮುನ್ನ ಪ್ರಮುಖ ಸಚಿವರು ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ಸಂಗ್ರಹಿಸಿದರು.