ಶೃಂಗೇರಿ, ರಾಮಚಂದ್ರಾಪುರ ಮಠಕ್ಕೆ ಮೋದಿ ಪತ್ನಿ ಭೇಟಿ

Team Udayavani, Mar 5, 2020, 3:05 AM IST

sringeri

ಚಿತ್ರದುರ್ಗ/ಹೊಸನಗರ/ಶೃಂಗೇರಿ: ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್‌ ಬುಧವಾರ ಹೊಸನಗರದ ರಾಮಚಂದ್ರಾಪುರ ಮಠ, ಶೃಂಗೇರಿ ಹಾಗೂ ಚಿತ್ರದುರ್ಗದ ನೀಲಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರಿನಿಂದ ಚಿತ್ರದುರ್ಗ ಮಾರ್ಗವಾಗಿ ಹೊಸನಗರಕ್ಕೆ ತೆರಳುವ ಮಾರ್ಗಮಧ್ಯೆ ಚಿತ್ರದುರ್ಗ ದಲ್ಲಿನ ನೀಲಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಬೆಳಗ್ಗೆ 9:30ರ ಸುಮಾರಿಗೆ ದೇವಾಲಯಕ್ಕೆ ಆಗಮಿಸಿ, ಅಭಿಷೇಕ, ಅಷ್ಟೋತ್ತರ ಹಾಗೂ ಮಹಾಮಂಗಳಾರತಿ ಸೇವೆ ಸಲ್ಲಿಸಿದರು.

ವಿಶೇಷವೆಂದರೆ, ಜಶೋದಾ ಬೆನ್‌ ಅವರು ಪ್ರತಿ ದಿನ ಶಿವನ ದರ್ಶನವಾಗದೆ ಒಂದು ಹನಿ ನೀರನ್ನೂ ಸೇವಿಸು ವುದಿಲ್ಲ. ನೀಲಕಂಠೇಶ್ವರ ದೇವಸ್ಥಾನದ ಮುಂದೆ ಕಾರು ಬಂದು ನಿಲ್ಲುತ್ತಿದ್ದಂತೆ ಜಶೋದಾ ಬೆನ್‌, ಇದು ಶಿವನ ದೇವಸ್ಥಾನವೇ ಎಂದು ಖಚಿತ ಪಡಿಸಿ ಕೊಂಡರು. ನಂತರ ಶಿವನ ದರ್ಶನವಾಗದೆ ನೀರು, ಆಹಾರ ಸೇವಿಸುವುದಿಲ್ಲ. ಹಾಗಾಗಿ, ಎಲ್ಲಿಗೆ ಹೋದರೂ ಮೊದಲು ಅಲ್ಲಿರುವ ಶಿವ ದೇವಾಲಯಕ್ಕೆ ತೆರಳುತ್ತಾರೆ ಎಂದು ಅವರ ಜತೆಗೆ ಆಗಮಿಸಿದ್ದ ರಾಘವೇಂದ್ರ ತಿಳಿಸಿದರು.

ರಾಮಚಂದ್ರಾಪುರ ಮಠಕ್ಕೆ ಭೇಟಿ: ಬಳಿಕ, ಶಿವಮೊಗ್ಗ ಜಿಲ್ಲೆ ಹೊಸನಗರದ ರಾಮಚಂದ್ರಾಪುರ ಮಠದಲ್ಲಿ ನಡೆದ ಕೃಷ್ಣಾರ್ಪಣಂ ಕಾರ್ಯಕ್ರಮದಲ್ಲಿ ಪಾಲ್ಗೊಂ ಡರು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಜಶೋ ದಾರಿಗೆ ಆರತಿ ಎತ್ತಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಗೋವರ್ಧನ ಗಿರಿಧಾರಿ ಗೋಪಾಲಕನ ಸನ್ನಿ ಧಿಗೆ ತೆರಳಿ ದೇವರ ದರ್ಶನ ಪಡೆದರು.

ನಂತರ, ದೇವಾಲಯದಲ್ಲಿ ರಜತ ಛತ್ರ ಸಮರ್ಪಣೆ ಮೂಲಕ ತಮ್ಮ ಹರಕೆ ತೀರಿಸಿದರು. ಮಂಗಳಾರತಿ ಸ್ವೀಕರಿಸಿದ ನಂತರ ರಾಘವೇಶ್ವರ ಶ್ರೀಗಳು ಸಾನ್ನಿಧ್ಯ ವಹಿಸಿದ್ದ ಧರ್ಮಸಭೆಗೆ ಆಗಮಿಸಿದರು. ವೇದಿಕೆ ಮೇಲೇರುತ್ತಿ ದ್ದಂತೆ ಭಕ್ತಾ ದಿಗಳಿಗೆ ಕೈಗಳನ್ನು ಮೇಲಕ್ಕೆತ್ತಿ ಧನ್ಯವಾದ ಸಮರ್ಪಿಸಿದರು. ಧರ್ಮಸಭೆಯಲ್ಲಿ ಮಾತನಾಡಿದ ಬಳಿಕ ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳು ಅವರನ್ನು ಶಾಲು ಹೊದಿಸಿ, ಮಂತ್ರಾಕ್ಷತೆ ನೀಡಿ ಸನ್ಮಾನಿಸಿ, ಗೌರವಿಸಿದರು.

ಶೃಂಗೇರಿ ಶಾರದಾಂಬೆಗೆ ಪೂಜೆ: ರಾಮಚಂದ್ರಾಪುರ ಮಠದಿಂದ ಹೊರಟ ಜಶೋದಾ ಬೆನ್‌, ಶೃಂಗೇರಿಯ ಶಾರದಾ ಪೀಠಕ್ಕೆ ಭೇಟಿ ನೀಡಿದರು. ಶಾರದಾಂಬಾ ದೇಗುಲದ ಹೊರ ಆವರಣದ ವಿದ್ಯಾಶಂಕರ ದೇಗುಲ, ಸುಬ್ರಹ್ಮಣ್ಯ ದೇವಸ್ಥಾನ, ತೋರಣ ಗಣಪತಿ, ಶಂಕರಾಚಾರ್ಯರ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.

ನಂತರ, ಶಾರದಾಂಬಾ ದೇಗುಲಕ್ಕೆ ತೆರಳಿ ಒಳ ಪ್ರಾಂಗಣದ ಶಕ್ತಿಗಣಪತಿ, ಶಾರದಾಂಬೆಗೆ ವಿಶೇಷ ಪೂಜೆ ನೆರವೇರಿಸಿದರು. ನರಸಿಂಹವನದಲ್ಲಿರುವ ಗುರುಭವನದಲ್ಲಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಗಳ ದರ್ಶನ-ಆಶೀರ್ವಾದ ಪಡೆದರು. ಮಠದ ಅತಿಥಿ ಗೃಹದಲ್ಲೇ ವಾಸ್ತವ್ಯ ಹೂಡಿದ್ದಾರೆ.

ದೇಶ ಸುಭಿಕ್ಷೆ ಮತ್ತು ಸಮೃದ್ಧಿಯಿಂದ ಇರಬೇಕಾದರೆ ಒಳ್ಳೆಯ ಮನಸ್ಸುಗಳಿಂದ ಇಲ್ಲಿರುವ ದೇವಶಕ್ತಿಗಳಲ್ಲಿ ಪ್ರಾರ್ಥಿಸಬೇಕು. ಸಮಷ್ಠಿಯ ಪ್ರಾರ್ಥನೆಯ ಫಲವಾಗಿ ಇಂದು ರಾಮಮಂದಿರವೂ ನಿರ್ಮಾಣವಾಗುತ್ತಿದೆ. ಅದು ದೇಶ ಒಳ್ಳೆಯ ದಾರಿಯತ್ತ ಸಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿ.
-ಜಶೋಧ ಬೆನ್‌, ಪ್ರಧಾನಿ ಮೋದಿ ಪತ್ನಿ

ಟಾಪ್ ನ್ಯೂಸ್

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.