ಹಣ ವರ್ಗಾವಣೆ: 3 ಅಧಿಕಾರಿಗಳ ಅಮಾನತು
Team Udayavani, Nov 3, 2017, 6:20 AM IST
ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್)ದ 55 ಕೋಟಿ ರೂ. ಠೇವಣಿಯ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ರಾಜ್ಯ ಸರಕಾರ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದು, ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.
ಪ್ರಕರಣ ಸಂಬಂಧ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ ಮುಖ್ಯ ಹಣಕಾಸು ಅಧಿಕಾರಿ ಡಾ| ವೀರನ ಗೌಡ ಪಾಟೀಲ್, ಉಪ ಹಣಕಾಸು ಅಧಿಕಾರಿ ಪ್ರಶಾಂತ್ ಮಾಡಾಳ್, ಹಣಕಾಸು ಅಧೀಕ್ಷಕ ಶಂಕರಾಚಾರಿ ಅವ ರನ್ನು ಅಮಾನತುಗೊಳಿಸಿ ಆದೇಶ ಹೊರ ಡಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ, ಪ್ರಕರಣವನ್ನು ಸಿಐಡಿಗೆ ವಹಿಸಿದೆ.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ 55 ಕೋಟಿ ರೂ.ಗಳನ್ನು ಮಂಗಳೂರಿನ ಗೋಕುಲ ನಗರದ ನವನಿಧಿ ಕಾಂಪ್ಲೆಕ್ಸ್‌ನಲ್ಲಿರುವ ಕುಳಾಯಿ ಶಾಖೆಯ ಇಂಡಿಯನ್ ಓವರ್‌ಸೀಸ್ ಬ್ಯಾಂಕಿನಲ್ಲಿ ನಿಗದಿತ ಠೇವಣಿ ಇರಿಸಿರುವ ಹಣ ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ನಿಜ ಎಂದು ಕಂಡು ಬಂದಿ ರುವ ಹಿನ್ನೆಲೆಯಲ್ಲಿ ಈ ಮೂರು ಮಂದಿ ಅಧಿಕಾರಿಗಳನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ.
ಕೆಆರ್‌ಐಡಿಎಲ್‌ನ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಂತರಿಕ ಆರ್ಥಿಕ ಸಲಹೆ ಗಾರರು ಕೈಗೊಂಡಿರುವ ಪ್ರಾಥಮಿಕ ತನಿಖೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ ಬೆಂಗಳೂರಿನ ಕೋರಮಂಗಲದ ವಿಜಯ ಬ್ಯಾಂಕ್ ಶಾಖೆ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದ ರಿಂದ ಬೆಂಗಳೂರಿನಲ್ಲಿ ಸಂಬಂಧ ಪಟ್ಟ ಪೊಲೀಸ್ ಠಾಣೆಯಲ್ಲಿ ಇನ್ನೊಂದು ಕ್ರಿಮಿನಲ್ ದೂರು ದಾಖಲಿಸಲು ಇಲಾಖೆ ತೀರ್ಮಾ ನಿಸಿದೆ. ಈಗಾಗಲೇ ಮಂಗಳೂರಿನ ಸುರತ್ಕಲ… ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ಸೂಕ್ತ ಕ್ರಮ ಜರಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಮಾಹಿತಿ ನೀಡಿದೆ.
ಉನ್ನತ ಸಮಿತಿ
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ವಿವಿಧ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಿರುವ ನಿಗದಿತ ಠೇವಣಿ ಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ಗ್ರಾಮೀಣಾಭಿವೃದ್ಧಿ- ಪಂಚಾಯತ್‌ರಾಜ್ ಇಲಾಖೆಯ ಪ್ರಧಾನಕಾರ್ಯದರ್ಶಿ ಡಾ| ನಾಗಾಂಬಿಕಾದೇವಿ ಅವರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ರಚಿಸಲು ಆದೇಶಿ ಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ