ಸಮನ್ವಯಕ್ಕೆ ಮೋರ್ಚಾ ಪದಾಧಿಕಾರಿಗಳಿಗೆ ಜವಾಬ್ದಾರಿ

Team Udayavani, Nov 18, 2019, 3:00 AM IST

ಬೆಂಗಳೂರು: 15 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾ ವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಬಂಡಾಯ ಸಾರಿ ಬಂದಿರುವ ಅನರ್ಹ ಶಾಸಕರು ಬಿಜೆಪಿ ಅಭ್ಯರ್ಥಿ ಗಳಾಗಿರುವುದರಿಂದ ಅವರೊಂದಿಗೆ ಬಿಜೆಪಿ ಕಾರ್ಯಕರ್ತರ ನಡುವೆ ಸಮನ್ವಯ ಸಾಧಿಸಲು ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳಿಗೆ ಜವಾಬ್ದಾರಿ ವಹಿಸಿದೆ.

ಭಾನುವಾರ ಚುನಾವಣಾ ಉಸ್ತುವಾರಿ ಅರವಿಂದ ಲಿಂಬಾವಳಿ ನೇತೃತ್ವ ದಲ್ಲಿ ಪಕ್ಷದ ಕಚೇರಿಯಲ್ಲಿ ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ನಡೆಸಲಾಗಿದ್ದು, ಪದಾಧಿ ಕಾರಿಗಳಿಗೆ ಕ್ಷೇತ್ರ ಗಳನ್ನು ಹಂಚಿಕೆ ಮಾಡಿ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿದು ಬಂದಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ