ಮಳವಳ್ಳಿ : ದೇವರ ಪ್ರಸಾದ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Team Udayavani, Jul 28, 2021, 11:40 AM IST
ಮಂಡ್ಯ : ಪ್ರಸಾದ ಸೇವಿಸಿದ್ದ ಸುಮಾರು 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಕಾಗೇಪುರ ಮತ್ತು ಕೊರೇಗಾಲ ಗ್ರಾಮಗಳಲ್ಲಿ ಮಂಗಳವಾರ ನಡೆದಿದೆ.
ಆಷಾಡ ಸೋಮವಾರ ಆಗಿದ್ದರಿಂದ ಟಿ.ಕಾಗೇಪುರ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮದ ಮುಖಂಡರೊಬ್ಬರು ಪೂಜಾ ಕಾರ್ಯಕ್ರಮ ಆಯೋಜಿಸಿದ್ದರು. ಆರ್ಚಕ ಶಿವಬಸಪ್ಪ ಅವರು ಬಾಳೆಹಣ್ಣು, ಬೆಲ್ಲ, ಅವಲಕ್ಕಿ, ಸಕ್ಕರೆ, ಏಲಕ್ಕಿಯಿಂದ ತಯಾರಿಸಿದ ಪಂಚಾಮೃತ ಪ್ರಸಾದ ತಯಾರಿಸಿ ದೇವರ ದರ್ಶನಕ್ಕೆ ಬಂದಿದ್ದ ಕೊರೇಗಾಲ ಗ್ರಾಮದ 6 ಮಂದಿ ಸೇರಿದಂತೆ ಸುಮಾರು 25 ಮಂದಿಗೆ ಪ್ರಸಾದ ನೀಡಿದ್ದಾರೆ.
ಪ್ರಸಾದ ಸೇವಿಸಿದ ಕೆಲವರಿಗೆ ಸೋಮವಾರ ರಾತ್ರಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಮಂಗಳವಾರ ಸಂಜೆ ವೇಳೆಗೆ ಬಹುತೇಕ ಮಂದಿಗೆ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದು, ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಸಂಜಯ್, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಅನಿಲ್, ಸ್ಥಳೀಯ ವೈದ್ಯಾಧಿಕಾರಿ ಡಾ.ಸಚಿನ್, ಡಾ.ಶಿವಶಂಕರ್ ಅಸ್ವಸ್ಥಗೊಂಡಿರುವವರ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದು, ಸ್ಥಳದಲ್ಲಿಯೇ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮೊಕ್ಕಾಂ ಹೊಡಿದ್ದಾರೆ.
ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಸಾದ ತಯಾರಿಸಿದ ಆರ್ಚಕರ ಬಳಿ ಮಾಹಿತಿ ಪಡೆದಿದ್ದು, ಪ್ರಸಾದವನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರೂ ಆರೋಗ್ಯವಾಗಿದ್ದು, ಎರಡು ಗ್ರಾಮಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಅಸ್ವಸ್ಥಗೊಂಡಿರುವವರ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ