ಲಸಿಕೆ ವಿತರಣೆಗೆ ನಡೆದಿದೆ ಸಿದ್ದತೆ: 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ
Team Udayavani, Nov 25, 2020, 7:49 AM IST
ಬೆಂಗಳೂರು: ರಾಜ್ಯದಲ್ಲಿ ಈವರೆಗೂ 24 ಸಾವಿರಕ್ಕೂ ಅಧಿಕ ಆರೋಗ್ಯ ಕೇಂದ್ರಗಳು ತಮ್ಮ ಸಿಬ್ಬಂದಿ ಮಾಹಿತಿ ನೀಡುವ ಕೋವಿಡ್-19 ಲಸಿಕೆಗೆ ನೋಂದಣಿ ಮಾಡಿಕೊಂಡಿವೆ.
ಈ ಮೂಲಕ ಕೋವಿಡ್-19 ಲಸಿಕೆ ಮೊದಲ ಹಂತದ ಫಲಾನುಭವಿಗಳ ಪಟ್ಟಿಯಲ್ಲಿ ರಾಜ್ಯದ ಮೂರು ಲಕ್ಷಕ್ಕೂ ಅಧಿಕ ಆರೋಗ್ಯ ಕಾರ್ಯಕರ್ತರಿದ್ದಾರೆ.
ಲಸಿಕೆಗೆ ನೋಂದಣಿ ಮಾಡಿಕೊಂಡವರ ಪೈಕಿ 3,076 ಸರ್ಕಾರಿ ವಲಯದ ಆರೋಗ್ಯ ಕೇಂದ್ರಗಳು, 21,000ಕ್ಕೂ ಅಧಿಕ ಖಾಸಗಿ ಆರೋಗ್ಯ ಕೇಂದ್ರಗಳಿವೆ. ಸರ್ಕಾರಿ ವಲಯದ್ದು, ಸಂಪೂರ್ಣ ಮಾಹಿತಿ ಲಭ್ಯವಾಗಿದ್ದು, 4000 ಸಾವಿರಕ್ಕೂ ಅಧಿಕ (ಶೇ.19 ರಷ್ಟು) ಖಾಸಗಿ ಆರೋಗ್ಯ ಕೇಂದ್ರಗಳು ಇಂದಿಗೂ ಮಾಹಿತಿ ನೀಡಿಲ್ಲ.
ಇದನ್ನೂ ಓದಿ:ಲಸಿಕೆ ವಿತರಣೆಗೆ ಸಿದ್ಧತೆ; ಸಂಗ್ರಹ, ದಾಸ್ತಾನು, ನೀಡಿಕೆಗೆ ರಾಜ್ಯ ಸರಕಾರ ಸನ್ನದ್ಧ
ಅಕ್ಟೋಬರ್ 20ರಿಂದಲೇ ಜಿಲ್ಲಾಮಟ್ಟದಲ್ಲಿ ನೋಂದಣಿ ಪ್ರಕ್ರಿಯ ಆರಂಭವಾಗಿತ್ತು. ಆರೋಗ್ಯ ಇಲಾಖೆಯು ಜಿಲ್ಲಾಮಟ್ಟದಲ್ಲಿ ನೋಂದಾಯಿತ ಎಲ್ಲಾ ಆರೋಗ್ಯ ಕೇಂದ್ರಗಳು ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ (ಆರ್‌ಸಿಎಚ್‌ಒ) ಬಳಿ ಮಾಹಿತಿ ಸಲ್ಲಿಸುವಂತೆ ಸುತ್ತೋಲೆ ಹೊರಡಿಸಿತ್ತು. ಆ ಅಧಿಕಾರಿಯೂ ಸಿಬ್ಬಂದಿಗಳ ಮಾಹಿತಿಯನ್ನು ಕೇಂದ್ರ ಸರ್ಕಾರ ಅಧಿಕೃತ ಆನ್‌ಲೈನ್ ಪೋರ್ಟಲ್ ಗೆ ಸೇರಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಮೂರು ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ
ಮೊದಲ ಹಂತ ಲಸಿಕೆಯನ್ನು ಆರೋಗ್ಯ ಕಾರ್ಯಕರ್ತತರಿಗೆ ನೀಡಲು ಕೇಂದ್ರ ಸರ್ಕಾರದ ಸೂಚನೆ ನೀಡಿದೆ. ಸದ್ಯ ರಾಜ್ಯದಲ್ಲಿ ಆರೋಗ್ಯ ಇಲಾಖೆ ಖಾಯಂ ಸಿಬ್ಬಂದಿ, ಗುತ್ತಿಗೆ, ಹೊರ ಗುತ್ತಿಗೆ ನೌಕರರು, ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ, ಆಶಾ ಮತ್ತು ಆರೋಗ್ಯ ಕಾರ್ಯಕರ್ತರನ್ನು ಸೇರಿಸಿ ಅಂದಾಜು 3.4 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ಹಂಚಲಾಗುತ್ತಿದೆ.
ರಾಜ್ಯದಲ್ಲಿ ಕೋವಿಡ್ ಲಸಿಕೆ ಮೊದಲ ಫಲನಾನುಭವಿಗಳು
*ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ – 50,000
*ಐಎಂಎ ರಾಜ್ಯ ಘಟಕದ ನೋಂದಾಯಿತ ವೈದ್ಯರು – 27,00
*ಖಾಸಗಿ ಆಸ್ಪತ್ರೆಗಳ ಸಹಾಯಕ ವೈದ್ಯಕೀಯ ಸಿಬ್ಬಂದಿ – 90,000
*ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆಯ ಗುತ್ತಿಗೆ, ಹೊರ ಗುತ್ತಿಗೆ ನೌಕರರು – 30,000
*ಆಶಾ ಕಾರ್ಯಕರ್ತರು – 42,000
*ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರು -1.1 ಲಕ್ಷ.
ಜಯಪ್ರಕಾಶ್ ಬಿರಾದಾರ್
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ
ಮಂಗಳೂರು : 44.2 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ