ಸಿದ್ದರಾಮಯ್ಯ – ಜಿ.ಟಿ ದೇವೇಗೌಡ ದೋಸ್ತಿ ಹಾಸ್ಯಾಸ್ಪದ: ಸಂಸದ ವಿ. ಶ್ರೀನಿವಾಸಪ್ರಸಾದ್

Team Udayavani, Dec 7, 2021, 12:42 PM IST

Untitled-1

ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ಮೂರು ದಿನ ಮಾತ್ರ ಬಾಕಿಯಿದೆ.  ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರವಾಗಿ ಪ್ರಚಾರಕ್ಕೆ ತೆರಳಲು ನನಗೆ ಸಾಧ್ಯವಾಗಿಲ್ಲ. ಅವರ ಪರ ಮಾಜಿ ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ವ್ಯಾಪಕ ಪ್ರಚಾರ ಮಾಡಿದ್ದಾರೆ. ರಘು ಕೌಟಿಲ್ಯ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್ ಹೇಳಿದರು.

ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು,ಆರೋಗ್ಯ ಸರಿಯಿಲ್ಲದ ಕಾರಣ ನಾನು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಮೊದಲೆಲ್ಲಾ ಕಾಂಗ್ರೆಸ್ ಜೆಡಿಎಸ್ ನಡುವೆ ಮಾತ್ರ ನೇರ ಸ್ಪರ್ಧೆ ಏರ್ಪಡುತ್ತಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಪ್ರಬಲವಾಗಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೌಟಿಲ್ಯ ಗೆಲುವು ಸಾಧಿಸಲಿದ್ದಾರೆ. ರಘು ಕೌಟಿಲ್ಯ ಗೆಲುವಿನ ಬಗ್ಗೆ ವಿಶ್ವಾಸವಿದೆ ಎಂದು ಹೇಳಿದರು.

ಇದನ್ನೂ ಓದಿ: ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್

ಕಳೆದ ಆರು ವರ್ಷಗಳ ಚುನಾವಣೆಯಲ್ಲಿ ಬಿಜೆಪಿ ಬಲಿಷ್ಠವಾಗಿದೆ. ರಾಜ್ಯ ರಾಜರಕರಣದಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ಬಿಜೆಪಿಯಲ್ಲಿ ಸಂಘಟನಾ ಕಾರ್ಯ ಚೆನ್ನಾಗಿದೆ ಎಂದರು.

ಮೈಸೂರು ಜಿಲ್ಲೆಯಲ್ಲಿ ಸಿದ್ದರಾಮಯ್ಯ-ಜಿ ಟಿ ದೇವೇಗೌಡ ಹತ್ತಿರವಾಗಿರುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಜಿ ಟಿ ದೇವೇಗೌಡ ಹೀನಾಯವಾಗಿ ಸೋಲಿಸಿದ್ದಾರೆ‌. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದುಕೊಂಡು 36 ಸಾವಿರ ಮತಗಳ ಅಂತರದಿಂದ ಸೋತಿದ್ದಾರೆ.ಬಾದಾಮಿಯಲ್ಲೂ ಅಲ್ಪ ಮತಗಳಿಂದ ಗೆದ್ದರು. ಇಲ್ಲದಿದ್ದರೆ ಸಿದ್ದರಾಮಯ್ಯನ ಹುಂಡಿಗೆ ಹೋಗಬೇಕಾಗಿತ್ತು. ವಾಸ್ತವ ಹೀಗಿದ್ದರೂ ತಮ್ಮನ್ನು ಹೀನಾಯವಾಗಿ ಸೋಲಿಸಿದ ಜಿ ಟಿ ದೇವೇಗೌಡ ಜೊತೆ ಸಿದ್ದರಾಮಯ್ಯ ಕೈಜೋಡಿಸಿರುವುದು ನಗೆಪಾಟಲಿಗೀಡಾಗಿದೆ, ಹಾಸ್ಯಾಸ್ಪದ ಆಗಿದೆ ಎಂದು ವ್ಯಂಗ್ಯವಾಡಿದರು.

ಹಿಂದೆ ಆರ್ ಎಸ್ ಎಸ್ ನ್ನು ವ್ಯಾಪಕವಾಗಿ ಟೀಕಿಸುತ್ತಿದ್ದ ಜೆಡಿಎಸ್ ಇದೀಗ ಬಿಜೆಪಿ ಜೊತೆ ಹೊಂದಾಣಿಕೆಗೆ ಮುಂದಾಗಿದೆ.  ಆರ್ ಎಸ್ ಎಸ್ ರಾಜಕೀಯ ಪಕ್ಷವಲ್ಲ, ಅದೊಂದು ಸಾಂಸ್ಕೃತಿಕ ಸಂಘಟನೆ ಆಗಿದೆ‌. ಆರ್ ಎಸ್ ಎಸ್ ಬಗ್ಗೆ ಯಾಕೆ ಟೀಕೆ ಮಾಡ್ತಾರೋ‌ ಗೊತ್ತಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲದ ಅಗತ್ಯವಿಲ್ಲ. ಕೇವಲ ನಾಲ್ಕೈದು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲ ನೀಡಿದರೆ ಬಿಜೆಪಿಗೆ ಅನುಕೂಲ ಆಗಲಿದೆಯಷ್ಟೇ. ಹೈಕಮಾಂಡ್ ಮಟ್ಟದಲ್ಲಿ ಬೆಂಬಲ ಪಡೆಯುವ ವಿಚಾರ ನಿರ್ಧಾರವಾಗಲಿದೆ ಎಂದರು.

ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯರಿಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಿ ಗೆಲ್ಲಿಸಿ ಎಂದು ಮನವಿ ಮಾಡಿದರು‌.

ಟಾಪ್ ನ್ಯೂಸ್

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.