
ಕ್ವಾಂಟಮ್ ಸಂಶೋಧನೆಗೆ ಹೆಚ್ಚು ಆದ್ಯತೆ: ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
Team Udayavani, Feb 20, 2021, 3:14 PM IST

ಬೆಂಗಳೂರು: ಆವಿಷ್ಕಾರ ಹಾಗೂ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಣ ಸಂಶೋಧನೆಗೆ (ಕ್ವಾಂಟಮ್) ಸರಕಾರ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಶನಿವಾರ ಕ್ವಾಂಟಮ್ ಸಂಶೋಧನೆ ಕುರಿತ ವರ್ಚುಯಲ್ ಚರ್ಚಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರಂಭದಿಂದ ಸಂಶೋಧನೆಯತ್ತ ಮುಕ್ತವಾಗಿ ತೆರೆದುಕೊಂಡಿರುವ ರಾಜ್ಯ ನಮ್ಮದು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ಮೇಲೆ ಇದಕ್ಕೆ ಇನ್ನೂ ಹೆಚ್ಚು ಒತ್ತು ನೀಡಲಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಕಣ ವಿಜ್ಞಾನ ಬೋಧನೆಗೆ ಹೆಚ್ಚು ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.
ಇದನ್ನೂ ಓದಿ:ಸಂಬಂಧಿಕರ ಮದುವೆಗಾಗಿ ಬರುತ್ತಿದ್ದವರ ಕಾರಿನ ಟಯರ್ ಸ್ಫೋಟ: ಪತಿ ಸಾವು, ಪತ್ನಿ ಗಂಭೀರ
ಬೆಂಗಳೂರು ಹಾಗೂ ರಾಜ್ಯದಲ್ಲಿನ ರಕ್ಷಣಾ ಸಂಶೋಧನೆ, ಶಿಕ್ಷಣ ಹಾಗೂ ವೈಜ್ಞಾನಿಕ ಸಂಸ್ಥೆಗಳು ಕೆಲಸ ಮಾಡುತ್ತಿದ್ದು, ಅಲ್ಲೆಲ್ಲ ಕ್ವಾಂಟಮ್ ಸಂಶೋಧನೆಯ ಬಗ್ಗೆ ಕೆಲಸ ಮಾಡಲಾಗುತ್ತಿದೆ. ಇದೆಲ್ಲವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಒಂದು ವ್ಯವಸ್ಥಿತ ಜಾಲ ರೂಪಿಸಿ ಸರಕಾರದಿಂದ ಮತ್ತಷ್ಟು ಪ್ರೋತ್ಸಾಹ-ಬೆಂಬಲ ಕೊಡಲಾಗುವುದು. ಇದು ನಮ್ಮ ಆರ್ಥಿಕ ಶಕ್ತಿ ಹಾಗೂ ವೈಜ್ಞಾನಿಕ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ ಎಂದು ಡಿಸಿಎಂ ಹೇಳಿದರು.
ಮೂಲ ವಿಜ್ಞಾನಕ್ಕೆ ಒತ್ತು: ಪ್ರಸ್ತುತ ರಾಜ್ಯದಲ್ಲಿ ಮೂಲ ವಿಜ್ಞಾನದತ್ತ ವಿದ್ಯಾರ್ಥಿಗಳು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಆವಿಷ್ಕಾರ ಮತ್ತು ಸಂಶೋಧನೆಗೆ ಸಿಗುತ್ತಿರುವ ಮನ್ನಣೆ, ಪ್ರೋತ್ಸಾಹವನ್ನು ಕಂಡು ಹೊಸ ತಲೆಮಾರಿನ ಯುವಜನರು ವಿಜ್ಞಾನವನ್ನು ಅಧ್ಯಯನ ಮಾಡುತ್ತಿದ್ದಾರೆ. ವಾಣಿಜ್ಯ ದೃಷ್ಟಿಯಿಂದಲೂ ಮೂಲ ವಿಜ್ಞಾನವನ್ನು ಉತ್ತೇಜಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿದೆ ಎಂದು ಡಿಸಿಎಂ ಹೇಳಿದರು.
ಇದನ್ನೂ ಓದಿ: ನಾನು ಎನ್ನುವ ಅಹಂಕಾರ ನಿಮ್ಮನ್ನಿಲ್ಲಿಗೆ ತೆಗೊಂಡೋಗಿದೆ: ಸಿದ್ದು ವಿರುದ್ಧ ವಿಶ್ವನಾಥ್ ಕಿಡಿ
ಆರ್‌ಎಸ್‌ಎಸ್ ಸಹ ಸರಕಾರ್ಯವಾಹ ಮುಕುಂದ್ ಜೀ, ಪ್ರಧಾನಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿ ಸದಸ್ಯ ಕಿರಣ್ ಕಾರ್ನಿಕ್, ಉದ್ಯಮಿ ದಿಲೀಪ್ ಸತ್ಯ, ಡಚ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕಿ ಸಂಧ್ಯ ವಾಸುದೇವನ್ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಇಬ್ಬರು ಯುವ ರೈತರು ಸಿಡಿಲಿಗೆ ಬಲಿ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕಕಾಲಕ್ಕೆ ‘ಶಕ್ತಿ’ಗೆ ಚಾಲನೆ

ಶಾಸಕ ಪ್ರದೀಪ್ ಈಶ್ವರ್ ಸಹಾಯವನ್ನು ಕೇಳಿ 500 ಕಿ.ಮೀ. ದೂರದಿಂದ ಬಂದವರು ಬರೀಗೈಲಿ ವಾಪಸ್

Drinking water ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ

ರಾಮನಗರ: ಟೋಲ್ ಸಿಬ್ಬಂದಿ ಹತ್ಯೆ ಪ್ರಕರಣ; ಇಬ್ಬರನ್ನು ಬಂಧಿಸಿದ ಪೊಲೀಸರು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
