ಮೈಸೂರಲ್ಲಿ ದೇವೇಗೌಡ-ದಿಗ್ವಿಜಯ್‌ ಮುಖಾಮುಖೀ

Team Udayavani, Mar 2, 2017, 3:50 AM IST

01-PTI-4.jpg

ಮೈಸೂರು: ನಗರದಲ್ಲಿ ಬುಧವಾರ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯ ಸಿಂಗ್‌ ಮುಖಾಮುಖೀ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕಳೆದ 3 ದಿನಗಳಿಂದ ಪತ್ನಿ ಜತೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ, ವಿಶ್ರಾಂತಿ ಪಡೆಯುತ್ತಿದ್ದ ದಿಗ್ವಿಜಯ ಸಿಂಗ್‌ ಬುಧವಾರ ಮೈಸೂರಿಗೆ ಆಗಮಿಸಿದರು. ದಿ. ಎಚ್‌.ಎಸ್‌.ಮಹದೇವಪ್ರಸಾದ್‌ ಅವರ ನಿವಾಸಕ್ಕೆ ಭೇಟಿ ನೀಡಿ, ನಂತರ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದರು. ಇದೇ ವೇಳೆ ಖಾಸಗಿ ಕಾರ್ಯಕ್ರಮ ನಿಮಿತ್ತ ನಗರಕ್ಕೆ ಬಂದಿದ್ದ ಮಾಜಿ ಪ್ರಧಾನಿ ದೇವೇಗೌಡ, ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವಿಷಯ ತಿಳಿದ ದಿಗ್ವಿಜಯ ಸಿಂಗ್‌, ಅಲ್ಲಿಗೇ ಬಂದು ಗೌಡರ ಜೊತೆ ಮಾತುಕತೆ ನಡೆಸಿದರು.  ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಇವರಿಬ್ಬರ ಭೇಟಿಗೆ ಮಹತ್ವ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮಹದೇವ ಪ್ರಸಾದ್‌ ಮನೆಗೆ ಭೇಟಿ: ಇದಕ್ಕೂ ಮೊದಲು, ಅಕಾಲಿಕ ಮರಣಕ್ಕೆ ತುತ್ತಾದ ಸಚಿವ ಎಚ್‌.ಎಸ್‌. ಮಹದೇವಪ್ರಸಾದ್‌ ಅವರ ನಿವಾಸಕ್ಕೆ ಭೇಟಿ ದಿಗ್ವಿಜಯ್‌ ಸಿಂಗ್‌ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೈಸೂರಿನ ಕುವೆಂಪುನಗರದಲ್ಲಿರುವ ಮಹದೇವಪ್ರಸಾದ್‌ ನಿವಾಸಕ್ಕೆ ಪತ್ನಿ ಅಮೃತಾರಾಯ್‌ ಜತೆಗೆ ಆಗಮಿಸಿದ ಅವರು, ಮಹದೇವ ಪ್ರಸಾದ್‌ ಪತ್ನಿ ಡಾ.ಗೀತಾ, ಪುತ್ರ ಗಣೇಶ್‌ ಪ್ರಸಾದ್‌ರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸಾದ್‌ ಅವರ ನಿಧನದ ಸಂದರ್ಭದಲ್ಲಿ ಕಾರ್ಯನಿಮಿತ್ತ ಮೈಸೂರಿಗೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಅವರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ ಎಂದರು.

ಕಾಲಿಗೆ ಬೀಳುವುದೂ ಬೇಡ, ಕಾಲೆಳೆಯುವುದೂ ಬೇಡ’

ಶ್ರೀರಂಗಪಟ್ಟಣ/ ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತಹಾಕಿ ಜೆಡಿಎಸ್‌ ನಿಂದ ಅಮಾನತುಗೊಂಡಿರುವ ಶಾಸಕ ಎನ್‌.  ಚೆಲುವರಾಯಸ್ವಾಮಿ ಅವರ ಪತ್ನಿ ಧನಲಕ್ಷ್ಮೀ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ರೆಸಾಟ್‌ ìನಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ಆಶೀರ್ವಾದ ಪಡೆದರು. ಬುಧವಾರ ಮೈಸೂರಿಗೆ ತೆರಳುತ್ತಿದ್ದ ದೇವೇಗೌಡರು, ಮಾರ್ಗಮಧ್ಯೆ ಶ್ರೀರಂಗಪಟ್ಟಣದ ಮಯೂರ ರೆಸಾರ್ಟ್‌ನಲ್ಲಿ ವಿಶ್ರಾಂತಿಗಾಗಿ ಆಗಮಿಸಿದ್ದರು. ಇದಕ್ಕೂ ಮೊದಲೇ ರೆಸಾರ್ಟ್‌ನಲ್ಲಿ ಚೆಲುವರಾಯಸ್ವಾಮಿ ದಂಪತಿ ದೇವೇಗೌಡರನ್ನು ಭೇಟಿ ಮಾಡಿದರೆನ್ನಲಾಗಿದೆ. ಧನಲಕ್ಷ್ಮೀ, ದೇವೇಗೌಡರ ಕಾಲಿಗೆ ಬಿದ್ದು 
ಆಶೀರ್ವಾದ ಪಡೆದರು. ಜತೆಯಲ್ಲಿದ್ದ ಚೆಲುವರಾಯಸ್ವಾಮಿ ಗೌಡರಿಗೆ ನಮಸ್ಕರಿಸಿ, ಮಾತನಾಡಿಸಲು ಪ್ರಯತ್ನಿಸಿದರೂ ಇದಕ್ಕೆ ಕ್ಯಾರೆ ಎನ್ನದೇ “ನೀವು ಕಾಲಿಗೆ ಬೀಳುವುದೂ ಬೇಡ, ಕಾಲೆಳೆಯುವುದೂ ಬೇಡ’ ಎಂದು ಅಲ್ಲಿಂದ ದೇವೇಗೌಡರು ನಿರ್ಗಮಿಸಿದರು ಎನ್ನಲಾಗಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.