
ನಾನೊಬ್ಬ ಪಕ್ಷ ನಿಷ್ಠೆಯ ಕಾರ್ಯಕರ್ತ, ನಿಷ್ಠರನ್ನು ಪಕ್ಷ ಗುರುತಿಸುತ್ತದೆ: ರವಿ ಕುಮಾರ್
Team Udayavani, Aug 2, 2021, 1:08 PM IST

ಬೆಂಗಳೂರು: ನಾನೊಬ್ಬ ಪಕ್ಷ ನಿಷ್ಠೆಯುಳ್ಳ ಕಾರ್ಯಕರ್ತ. ಪಕ್ಷ ನಿಷ್ಠಾವಂತರನ್ನು ಪಕ್ಷ ಗುರುತಿಸುತ್ತದೆ ಎಂದು ಬಿಜೆಪಿ ಎಂಎಲ್ ಸಿ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಹೇಳಿದರು. ಈ ಮೂಲಕ ತಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರೋಕ್ಷವಾಗಿ ಹೇಳಿದರು.
ರವಿ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಬಿಎಸ್‌ವೈ ನಿವಾಸ ಕಾವೇರಿಗೆ ಆಗಮಿಸಿ ಒತ್ತಾಯ ಮಾಡಿದ್ದರು. ಈ ಕುರಿತಾಗಿ ಮಾತನಾಡಿದ ರವಿ ಕುಮಾರ್, ಇವತ್ತು ಸ್ವಾಮೀಜಿಗಳು ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಸ್ವಾಮೀಜಿಗಳು ಕೇಳಿರೋದರಲ್ಲಿ ತಪ್ಪೇನಿಲ್ಲ. ಬೇರೆ ಬೇರೆ ಸ್ವಾಮೀಜಿಗಳು ಕೇಳಿದ್ದಾರೆ. ನನಗೆ ಸಚಿವ ಸ್ಥಾನ ಕೊಟ್ಟರೂ ಸಂತೋಷ, ಕೊಡದಿದ್ದರೂ ಸಂತೋಷ ಎಂದರು.
ಇದನ್ನೂ ಓದಿ:ಇಂದೂ ಮುಂದುವರಿಯಲಿದೆ ಸಂಪುಟ ಸರ್ಕಸ್: 15 ಶಾಸಕರಿಗೆ ಮಾತ್ರ ಅವಕಾಶ? ಹಿರಿಯರಿಗೆ ಕೊಕ್?
ನಾನು ಹೋರಾಟದ ಮೂಲಕವೇ ಬಂದವನು. ಸಂಘದಿಂದ ಬಂದವರನ್ನು ಗುರುತಿಸಲಾಗುತ್ತದೆ. ನನಗೆ ಸಚಿವ ಸ್ಥಾನ ಕೊಟ್ಟರೂ ಸರಿ, ಇಲ್ಲವಾದರೂ ನೋವಿಲ್ಲ ಎಂದು ರವಿಕುಮಾರ್ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guarantee Scheme ಬಗ್ಗೆ ಪ್ರತಿಭಟನೆ ಮಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ; ಸಿದ್ದರಾಮಯ್ಯ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
