ಕೆಂಪೇಗೌಡ ಬೆಂಗಳೂರು ನಗರ ನಿರ್ಮಾತೃ, ಪ್ರತಿ ಜೂ.27ರಂದು ಜಯಂತಿ; ಸಿಎಂ


Team Udayavani, Jun 27, 2017, 3:58 PM IST

siddu22.jpg

ಬೆಂಗಳೂರು:ಇಂದಿನ ಬೆಂಗಳೂರಿನ ಪೇಟೆಗಳ ನಿರ್ಮಾತೃ ಕೆಂಪೇಗೌಡರು. 70 ದಶಕಗಳ ಹಿಂದೆ ಬೆಂಗಳೂರು ತುಂಬಾ ಸುಂದರವಾಗಿತ್ತು. ಇಲ್ಲಿನ ವಾತಾವರಣ ಎಲ್ಲರಿಗೂ ಇಷ್ಟವಾಗುವಂತಿತ್ತು. ಗಾರ್ಡನ್ ಸಿಟಿ ಎಂಬ ಹೆಗ್ಗಳಿಕೆಗೂ ನಗರ ಪಾತ್ರವಾಗಿತ್ತು.  4 ದಿಕ್ಕುಗಳಲ್ಲಿಯೂ 4 ಗೋಪುರಗಳನ್ನು ಕೆಂಪೇಗೌಡರು ನಿರ್ಮಿಸಿದ್ದರು. ಆದರೆ ಬೆಂಗಳೂರು ನಗರ ಇಂದು ಗೋಪುರ ಬಿಟ್ಟು ಬೆಳೆದಿದೆ. ಕೆರೆಗಳನ್ನು ನುಂಗುವ ಕೆಲಸವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಜಾತ್ಯತೀತ ನಾಯಕರಾಗಿದ್ದರು. ಕೆಂಪೇಗೌಡರ ಹೆಸರು ಅಜರಾಮರವಾಗಿರಬೇಕು. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯನಿರ್ವಹಿಸಿದೆ ಎಂದು ಹೇಳಿದರು.

ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವು. ಬಳಿಕ ದೇವನಹಳ್ಳಿ ಏರ್ ಪೋರ್ಟ್ ಗೆ ಕೆಐಎಎಲ್ ಹೆಸರು ಬಂತು. ಮೆಟ್ರೋ ನಿಲ್ದಾಣಕ್ಕೂ ಕೆಂಪೇಗೌಡರ ಹೆಸರನ್ನು ಇಡಲಾಗಿದೆ. ಬೆಂಗಳೂರು ವಿವಿ 3 ಭಾಗವಾಗಿದೆ. ಅದರಲ್ಲಿ ಒಂದು ವಿವಿಗೆ ಕೆಂಪೇಗೌಡರ ಹೆಸರಿಡಲು ಸರ್ಕಾರ ಚಿಂತನೆ ನಡೆಸಿದೆ. ನಾವು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದೇವೆ ಎಂದರು.

ಕೆಂಪೇಗೌಡರು ಬೆಂಗಳೂರನ್ನು ಸುಂದರ ನಗರವನ್ನಾಗಿ ಬೆಳೆಸಿದ್ದರು. ಕೆರೆಗಳನ್ನು ಕಟ್ಟಿ ರಕ್ಷಿಸಿದ್ದರು. ಆದರೆ ಇಂದು ಬೆಂಗಳೂರಿನಲ್ಲಿ ಕೆರೆಗಳನ್ನು ನುಂಗಿ ಕೆರೆಗಳೇ ಮಾಯವಾಗಿದೆ. ಬೆಂಗಳೂರಿನ ಜನಸಂಖ್ಯೆ ಇಂದು ಒಂದು ಕೋಟಿಗೂ ಮೀರಿದೆ. ನಗರದಲ್ಲಿ ಸುಮಾರು 40 ಲಕ್ಷ ದ್ವಿಚಕ್ರ ವಾಹನಗಳಿವೆ. ಒಟ್ಟು 67 ಲಕ್ಷ ವಾಹನಗಳು ನಗರದಲ್ಲಿ ದಿನಂಪ್ರತಿ ಸಂಚರಿಸುತ್ತವೆ ಎಂದು ವಿವರಿಸಿದರು.

ಪ್ರತಿ ಜೂನ್ 27ರಂದು ರಾಜ್ಯಾದ್ಯಂತ ಕೆಂಪೇಗೌಡ ಜಯಂತಿ:
ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರ ಜಯಂತಿಯನ್ನು ಪ್ರತಿವರ್ಷ ಜೂನ್ 27ರಂದು ರಾಜ್ಯಾದ್ಯಂತ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಂಪೇಗೌಡ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದರು.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.