ತಂಗಡಗಿಗೆ ಸೆಡ್ಡು: ಮಾಜಿ ಸಚಿವ ನಾಗಪ್ಪ ಸಾಲೋಣಿ ಬಿಜೆಪಿಗೆ
Team Udayavani, Apr 3, 2018, 2:31 PM IST
ಕನಕಗಿರಿ: ಪಕ್ಷಾಂತರ ಪರ್ವ ಮುಂದುವರಿದಿದ್ದು, ಮಾಜಿ ಸಚಿವ, ಕುರುಬ ಸಮುದಾಯದ ಪ್ರಭಾವಿ ನಾಯಕ ನಾಗಪ್ಪ ಸಾಲೋಣಿ ಅವರು ತನ್ನ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.
ಕಳೆದ ಚುನಾವಣೆಯಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಾಲೋಣಿ ಅವರು ಕಾಂಗ್ರೆಸ್ನಲ್ಲಿರುವ ಗುಂಪುಗಾರಿಕೆಯಿಂದ ಬೇಸತ್ತು ಯಾವುದೇ ಬೇಡಿಕೆಗಳಿಲ್ಲದೆ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ಸಾಲೋಣಿ ಅವರನ್ನು ಬಿಜೆಪಿಗೆ ಕರೆತರುವಲ್ಲಿ ಸಂಸದ ಸಂಗಣ್ಣ ಕರಡಿ ಅವರು ಮಾತುಕತೆ ನಡೆಸಿದ್ದಾರೆ.
ಎಪ್ರಿಲ್ 5 ರಂದು ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಾಲೋಣಿ ಸೇರಿದಂತೆ ಕನಕಗಿರಿಯ ಹಲವು ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಮಾಜಿ ಸಚಿವ ತಂಗಡಗಿಗೆ ಈ ಬೆಳವಣಿಗೆ ಆಘಾತಕಾರಿಯಾಗಿದ್ದು, ಭಾರೀ ಪೈಪೋಟಿ ಎದುರಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್