ಸಿದ್ದರಾಮಯ್ಯನವರೇ ನಿಮ್ಮ ರಾಜಕೀಯ ಭವಿಷ್ಯ ಎಲ್ಲಿ ಎಂದು ಯೋಚನೆ ಮಾಡಿ: ನಳಿನ್ ಕಟೀಲ್
Team Udayavani, Nov 11, 2020, 12:47 PM IST
ಮಂಗಳೂರು: ವಿಪಕ್ಷ ನಾಯಕ ಸಿದ್ಧರಾಮಯ್ಯನವರು ಮತ್ತೆ ಮುಖ್ಯಮಂತ್ರಿಯಾಗುವ ಕನಸನ್ನು ಇನ್ನಾದರು ಬಿಡಬೇಕು. ಮುಂದಿನ ಹತ್ತು ವರ್ಷಗಳ ಕಾಲ ಆ ಕನಸನ್ನು ಬಿಡಿ, ಬಾದಾಮಿಯಲ್ಲೂ ಜನ ನಿಮ್ಮನ್ನು ತಿರಸ್ಕಾರ ಮಾಡಲಿದ್ದಾರೆ. ನಿಮ್ಮ ರಾಜಕೀಯ ಭವಿಷ್ಯ ಎಲ್ಲಿ ಎಂದು ಮೊದಲು ಯೋಚನೆ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದರು.
ಉಪಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಉಪ ಚುನಾವಣೆಯ ಫಲಿತಾಂಶದಿಂದ ಬಂಡೆ ಪುಡಿಯಾಗಿದೆ, ಕಾಂಗ್ರೆಸ್ ನ ಹುಲಿಯಾ ಗೂಡು ಸೇರಿದೆ. ಚುನಾವಣಾ ಪೂರ್ವದಲ್ಲಿ ಬಿಜೆಪಿ ಅಲೆ ಎಲ್ಲಿದೆ ಎಂದು ಸಿದ್ಧರಾಮಯ್ಯ ಕೇಳಿದ್ದರು. ಆದರೆ ಈಗ ಹುಲಿಯಾ ಗೂಡು ಸೇರಿದೆ ಅಂತಾ ಜನ ಹೇಳುತ್ತಿದ್ದಾರೆ ಎಂದರು.
ಉಪಚುನಾವಣೆಯಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಕೆಲಸ ಮಾಡಿದೆ. ಶಿರಾದಲ್ಲಿ ಎಲ್ಲರ ಪರಿಶ್ರಮದಿಂದ ಬಿಜೆಪಿ ಗೆಲುವು ಸಾಧಿಸಿದೆ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಯಾಗಿಲ್ಲ, ಚುನಾವಣೆ ಸಂಧರ್ಭದಲ್ಲಿ ಸರ್ಕಾರದ ವಿರುದ್ಧ ಆರೋಪ ಮಾಡಿದರು. ಆದರೆ ಕಾಂಗ್ರೆಸ್ ಭ್ರಷ್ಟಾಚಾರದ ಪಾರ್ಟಿ ಎಂದು ಸಾಬೀತಾಗಿದೆ.
ಆರ್ ಆರ್ ನಗರ ಶಿರಾದಲ್ಲಿ ಕಾಂಗ್ರೆಸ್ ಜಾತಿ ರಾಜಕೀಯ ಮಾಡಿದ್ದಾರೆ. ಆದರೆ ಜನ ಇದನ್ನೆಲ್ಕಾ ತಿರಸ್ಕಾರ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ
ರೈತರ ಹೆಸರಿನಲ್ಲಿ ಗೂಂಡಾಗಿರಿ: ನಳಿನ್ಕುಮಾರ್ ಕಟೀಲ್ ಖಂಡನೆ
ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್
ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ
ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ: ಶ್ರೀರಾಮುಲು