ಡಿಎಂಎಪ್ ನಿಧಿಯಲ್ಲಿ ಆಕ್ಸಿಜನ್ ಟ್ಯಾಂಕರ್ ಖರೀದಿ: ನಿರಾಣಿ ಕಾರ್ಯಶೈಲಿಗೆ ಕಟೀಲು ಮೆಚ್ಚುಗೆ
Team Udayavani, May 13, 2021, 12:07 PM IST
ಬೆಂಗಳೂರು: ಆಮ್ಲಜನಕ ಟ್ಯಾಂಕರ್ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್) ಅಡಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಅಗತ್ಯವಾದ ಆಮ್ಲಜನಕ ಟ್ಯಾಂಕರ್ ಖರೀದಿಸಲು ಮತ್ತು ಅದನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಸಾಗಿಸಲು ಕೋವಿಡ್ -19 ಗೆ ಚಿಕಿತ್ಸೆ ನೀಡಲು ಸಚಿವ ಮುರುಗೇಶ್ ನಿರಾಣಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದಕ್ಕಾಗಿ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ಸೂಚಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರು ಸಚಿವ ಮುರುಗೇಶ್ ನಿರಾಣಿಯವರ ಜೊತೆ ಮಾತುಕತೆ ನಡೆಸಿ ಜಿಲ್ಲೆಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಮತ್ತು ಸಾಗಿಸಲು 24 ಮೆಟ್ರಿಕ್ ಟನ್ ಆಕ್ಸಿಜನ್ ಸಂಗ್ರಹ ಸಾಮರ್ಥ್ಯದ ಆಕ್ಸಿಜನ್ ಟ್ಯಾಂಕರ್ ಖರೀದಿ ಮಾಡಲು ಎಂಡಿಎಫ್ ನಿಧಿ ಬಳಸಿಕೊಳ್ಳುವಂತೆ ಮನವಿ ಮಾಡಿದ್ದರು. ಇದಕ್ಕೆ ಸಚಿವ ನಿರಾಣಿ ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅಗತ್ಯವಿರುವ ಕಡೆ ಆಕ್ಸಿಜನ್ ಟ್ಯಾಂಕರ್ ಖರೀದಿಸಲು ತೀರ್ಮಾನಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದಲೂ ಬೇಡಿಕೆ ಬಂದರೆ ಸಕಾರಾತ್ಮಕವಾಗಿ ಪರಿಗಣಿಸಲು ಸಚಿವ ನಿರಾಣಿ ಅವರು ತೀರ್ಮಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ