ಯಾರಿಗೂ ಹೇಳ್ಬೇಡಿ ಎನ್ನುತ್ತಲೇ ‘ಈ ಮೂವರಲ್ಲಿ ಯಾರೂ ಸಿಎಂ ಆಗಬಹುದು’ ಎಂದ ನಳಿನ್ ಕಟೀಲ್!
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ತುಳು ಆಡಿಯೋ ಒಂದು ವೈರಲ್
Team Udayavani, Jul 19, 2021, 8:27 AM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ತಮ್ಮ ಆಪ್ತರೊಂದಿಗೆ ಅವರು ತುಳುವಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ.
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆ ನಡೆಯುತ್ತಿರುವಾಗಲೇ ಈ ಆಡಿಯೋ ಸಂಚಲನ ಸೃಷ್ಟಿಸಿದೆ. ತುಳುವಿನಲ್ಲಿರುವ ಆಡಿಯೋದಲ್ಲಿ, “ ಯಾರಿಗೂ ಹೇಳ್ಬೇಡಿ, ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ತಂಡವನ್ನು ತೆಗೆದು ಹೊಸ ತಂಡ ಕಟ್ಟಲಾಗುವುದು. ಮೂರು ಹೆಸರಿದೆ, ಮೂವರಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಯಾರೇ ಆದರೂ ನಮಗೇ ಚಾನ್ಸ್, ಇಲ್ಲಿಯವರನ್ನು ಯಾರನ್ನೂ ಮಾಡಲ್ಲ ಡೆಲ್ಲಿಯಿಂದಲೇ ಎಲ್ಲಾಆರ್ಡರ್” ಎಂದು ಈ ಆಡಿಯೋದಲ್ಲಿ ಕೇಳಿಬಂದಿದೆ. ಆದರೆ ಆಡಿಯೋದ ಖಚಿತತೆ ಇನ್ನೂ ಸ್ಪಷ್ಟವಾಗಿಲ್ಲ.
ಇದನ್ನೂ ಓದಿ:ನಾಯಕತ್ವ ಬದಲಾವಣೆ; ಮುಂದುವರಿದ ನಿಗೂಢತೆ : ಜುಲೈ 26ರ ಕೌತುಕ
ಆಡಿಯೋ ವೈರಲ್ ಆದ ಬೆನ್ನಲ್ಲೇ, “ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು” ನಳಿನ್‍ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಆದರೆ ಆಡಿಯೋದಲ್ಲಿರುವ ಮಾತುಗಳು ಬಿಜೆಪಿಯಲ್ಲಿನ ಉರಿಯುವ ಬೆಂಕಿಗೆ ತುಪ್ಪ ಸುರಿದ ಹಾಗಿದೆ. ಈಗಾಗಲೇ ಜು.26ರ ಲೆಕ್ಕಾಚಾರ ಜೋರಾಗಿದ್ದು, ಅದರ ಬೆನ್ನಲ್ಲೇ ಈ ಆಡಿಯೋ ಬಿಎಸ್ ವೈ ವಿರೋಧಿ ಪಾಳಯಕ್ಕೆ ಸಂತಸ ಉಂಟು ಮಾಡಿದೆ.
ಯಾರು ಆ ಮೂವರು?: ನಳಿನ್ ಕುಮಾರ್ ಅವರದೆನ್ನಲಾದ ಆಡಿಯೋದಲ್ಲಿ ಹೇಳಿರುವಂತೆ ಸಿಎಂ ಹುದ್ದೆಗೆ ಮೂವರ ಹೆಸರಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದರೆ, ಪಕ್ಷದ ವರಿಷ್ಠರು ಪ್ರಹ್ಲಾದ್ ಜೋಶಿ, ಲಕ್ಷ್ಮಣ ಸವದಿ ಮತ್ತು ಮುರುಗೇಶ್ ನಿರಾಣಿ ಅವರಲ್ಲಿ ಒಬ್ಬರಿಗೆ ಹುದ್ದೆ ನೀಡುವ ಬಗ್ಗೆ ಆಸಕ್ತಿ ವಹಿಸಿದ್ದಾರೆ ಎಂದು ಭಿನ್ನರ ಮೂಲಗಳು ಹೇಳಿವೆ. ಆದರೆ ವರಿಷ್ಠರು ಬಸವರಾಜ ಬೊಮ್ಮಾಯಿ ಹೆಸರು ಪ್ರಸ್ತಾವಿಸಿದ್ದಾರೆ ಎಂದು ಬಿಎಸ್‌ವೈ ಆಪ್ತ ಮೂಲಗಳು ತಿಳಿಸಿವೆ.
ಜುಲೈ 26ರಂದು ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣವಾಗುತ್ತದೆ. ಅಂದರ ಪ್ರಯುಕ್ತ ಬಿಎಸ್ ವೈ ಪಕ್ಷದ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಇದಾದ ಕೆಲ ದಿನಗಳ ಬಳಿಕ ಸಿಎಂ ಮತ್ತೆ ದೆಹಲಿಗೆ ಹೋಗಲಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ರಾಜ್ಯ ರಾಜಕೀಯ ಮತ್ತೆ ‘ಎಡ್ಜ್ ಆಫ್ ದಿ ಸೀಟ್’ ಪರಿಸ್ಥಿತಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ದಾವೋಸ್ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ
ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ
ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ
ರಾಜ್ಯದಲ್ಲಿ ಕಾಂಗ್ರೆಸ್ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ
ಶಿರಸಿಯ ರಂಗಭೂಮಿ ಕಲಾವಿದೆ ಶೀತಲ್ ಶ್ರೀಪಾದ ಭಟ್ ಅವರಿಗೆ ಕೆನಡಾದ ಲಿಟರರಿ ಅವಾರ್ಡ್
MUST WATCH
ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ
IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್
Wheel Chair Romeo actor exclusive interview | RELEASING ON MAY 27TH
ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ
ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?
ಹೊಸ ಸೇರ್ಪಡೆ
ಹೊಸ ಸರಕಾರಿ ಹಾಸ್ಟೆಲ್ಗೆ 6.5 ಕೋ.ರೂ. ಬಿಡುಗಡೆ
ದ.ಕ. ಜಿಲ್ಲೆಯಲ್ಲಿ ಮರಳು ಹೇರಳವಾಗಿ ಲಭ್ಯ: ಡಿಸಿ ;”ಮರಳು ಮಿತ್ರ’ ಮೂಲಕ ಮಿತ ದರದಲ್ಲಿ ಲಭ್ಯ
ಬೆಳ್ತಂಗಡಿ ತಾಲೂಕಿಗೆ ಜಿಲ್ಲಾಧಿಕಾರಿ ಭೇಟಿ: ಚಾರ್ಮಾಡಿ ಘಾಟಿ, ಭೂಕುಸಿತ ಪ್ರದೇಶ ಪರಿಶೀಲನೆ
ಈಡನ್ನಲ್ಲಿ ಆರ್ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ ಸೂಪರ್ ಜೈಂಟ್ಸ್
ಸಿಎಂ ದಾವೋಸ್ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ