ನಂದಿಗಿರಿ ಧಾಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
Team Udayavani, Aug 19, 2019, 3:00 AM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉಗ್ರರ ದಾಳಿಯಾಗುವ ಸಾಧ್ಯತೆ ಇದೆಯೆಂಬ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ನಂದಿಗಿರಿ ಧಾಮಕ್ಕೆ ವಿಶೇಷ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಗಿರಿಧಾಮ ಆಂಧ್ರಪ್ರದೇಶಕ್ಕೆ ಸಮೀಪದಲ್ಲಿದೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 30 ಕಿ.ಮೀ.ಅಂತರದಲ್ಲಿದೆ.
ವೀಕೆಂಡ್‌ನಲ್ಲಿ ಇಲ್ಲಿಗೆ ಸುಮಾರು 15 ರಿಂದ 20 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಗಿರಿಧಾಮಕ್ಕೆ ಬರುವ ಪ್ರತಿಯೊಂದು ವಾಹನ, ಪ್ರವಾಸಿಗರನ್ನು ತಪಾಸಣೆ ನಡೆಸಿಯೇ ಒಳಗೆ ಬಿಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಸಂತೋಷ ಬಾಬು ತಿಳಿಸಿದ್ದಾರೆ.