ಎನ್ ಸಿಬಿ ದಾಳಿ: ಬೆಂಗಳೂರಿನ ಸೆಲೆಬ್ರಿಟಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದವನ ಬಂಧನ
Team Udayavani, Sep 2, 2020, 9:56 AM IST
ಬೆಂಗಳೂರು: ದಿನಕಳೆದಂತೆ ಮಾದಕ ವಸ್ತು ಲೋಕದ ಹಲವು ಮುಖಗಳು ಅನಾವರಣಗೊಳ್ಳುತ್ತಿದೆ. ಡ್ರಗ್ ಪೆಡ್ಲರ್ ಗಳು ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ. ಡ್ರಗ್ಸ್ ಜಾಲದ ಕರಾಳ ಮುಖ ಬಯಲಾಗುತ್ತಿದೆ. ಈ ಮಧ್ಯೆ ಎನ್ ಸಿಬಿ ಅಧಿಕಾರಿಗಳು ದಾಳಿ ಮಾಡಿ ರಾಷ್ಟ್ರ ರಾಜಧಾನಿಯಿಂದ ರಾಜ್ಯ ರಾಜಧಾನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಓರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಎಫ್ ಅಹಮದ್ ಎಂದು ಗುರುತಿಸಲಾಗಿದೆ. ಈತ ಪೇಜ್ ತ್ರೀ ಸೆಲೆಬ್ರಿಟಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಎಂದು ಎನ್ ಸಿಬಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಆರೋಪಿ ಅಹಮದ್ ಬಳಿಯಿಂದ ಮೂರು ಕೆಜಿಯಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈತ ದಿಲ್ಲಿಯಿಂದ ಮುಂಬೈಗೆ, ಮುಂಬೈನಿಂದ ಬೆಂಗಳೂರಿಗೆ ಪೂರೈಕೆ ಮಾಡುತ್ತಿದ್ದ ಎಂದು ವರದಿಯಾಗಿದೆ.
ಗೋವಾ ಮೂಲದವನಾದ ಈತ ಖಾಸಗಿ ರೆಸಾರ್ಟ್ ಒಂದರಲ್ಲಿ ಕಾರು ಚಾಲಕನಾಗಿದ್ದ ಎನ್ನಲಾಗಿದೆ. ಒಂದು ಗ್ರಾಂಗೆ ಐದು ಸಾವಿರದಷ್ಟು ಬೆಲೆ ಬಾಳುವ ಈ ಮಾದಕ ವಸ್ತುವನ್ನು ಪ್ರತಿಷ್ಠಿತ ವ್ಯಕ್ತಿಗಳಿಗೆ ಪೂರೈಸುತ್ತಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ
“ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!: ಕುಮಾರಸ್ವಾಮಿ ಕಳವಳ
ಬಜೆಟ್ ಅನುಷ್ಠಾನ, ಕಡತ ವಿಲೇವಾರಿ: ಇಂದು ಸಂಜೆ ಸಿಎಂ ತುರ್ತು ಸಭೆ
ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ
ಗುಂಡ್ಲುಪೇಟೆ: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸಾವು, ಮತ್ತೊಬ್ಬ ಗಂಭೀರ