ಎನ್‌ಇಪಿ ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ನಾಗ್ಪುರ ಶಿಕ್ಷಣ ನೀತಿ:ಡಿಕೆಶಿ
Team Udayavani, Sep 4, 2021, 10:00 PM IST
ಬೆಂಗಳೂರು: ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿರುವ ಎನ್‌ಇಪಿ ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಮಾಡಲಿದೆ. ಏನೇ ತಿಪ್ಪರಲಾಗ ಹಾಕಿದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದೂ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಅದರ ಬಗ್ಗೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಆಗಬೇಕು. ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚಿಸಬೇಕು. ಆದರೆ ಅದ್ಯಾವುದು ನಡೆದಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದುದ್ದಗಲಕ್ಕೂ ಜನರ ಜತೆ ಚರ್ಚಿಸಿ, ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
ನಾನು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಾ ಬಂದಿದ್ದೇನೆ. ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿದ್ದೇನೆ. ಈ ನೂತನ ಶಿಕ್ಷಣ ನೀತಿ ಏನು, ಅದರಿಂದ ಆಗುವ ಪ್ರಯೋಜನೆಗಳೇನು? ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನಿಂದಲೇ ಸಾಧ್ಯವಾಗುತ್ತಿಲ್ಲ ಎಂದರು.
ಇದನ್ನೂ ಓದಿ:ಕಾನೂನು ಬಾಹಿರವಾಗಿ ಮತಾಂತರ, 8 ಮಂದಿ ಬಂಧನ : ಅಂಗವಿಕಲರು, ನಿರುದ್ಯೋಗಿಗಳೇ ಇವರ ಟಾರ್ಗೆಟ್
ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ಚರ್ಚೆಯೇ ನಡೆಯದೇ, ಏಕಾಏಕಿ ಈ ನೀತಿ ಜಾರಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದರಿಂದ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಎಲ್ಲರೂ ಗಾಬರಿ ಬಿದ್ದಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಈ ನೀತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್, ಶಿಕ್ಷಣ ಸಂಸ್ಥೆಗಳು, ಪೋಷಕರು, ಶಿಕ್ಷಕರ ಮಟ್ಟದಲ್ಲಿ ಸಂಪೂರ್ಣವಾಗಿ ಚರ್ಚೆಯಾಗುವವರೆಗೂ ಈ ನೀತಿ ಜಾರಿಯನ್ನು ತಡೆ ಹಿಡಿಯಬೇಕು. ಅಲ್ಲಿಯವರೆಗೂ ನಾವು ಕೂಡ ಇದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.
ಈ ನೀತಿಯಲ್ಲಿ ಕೆಲವು ಉತ್ತಮ ಅಂಶಗಳು ಇರಬಹುದು. ಆದರೆ, ತ್ರಿಭಾಷಾ ಸೂತ್ರ ಪರಿಚಯಿಸುವ ಮೂಲಕ ಹಿಂಬಾಗಿಲಿನಿಂದ ಹಿಂದಿ ಭಾಷೆ ಹೇರಿಕೆಗೆ ಪ್ರಯತ್ನಿಸಲಾಗುತ್ತಿದೆ. ಈ ವಿಚಾರವಾಗಿ ಕನ್ನಡಪರ ಸಂಘಟನೆಗಳು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಇದೇ ನೀತಿಯನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ನಲ್ಲಿ ಯಾಕೆ ಜಾರಿತರಲು ಪ್ರಯತ್ನಿಸುತ್ತಿಲ್ಲ. ಕೇರಳ ಹಾಗೂ ತಮಿಳುನಾಡಿನಲ್ಲಿ ಇದರ ವಿಚಾರದಲ್ಲಿ ಮಾತು ಕೂಡ ಆಡುವ ಸ್ಥಿತಿ ಇಲ್ಲ. ಮಾತನಾಡಿದರೆ, ಅಲ್ಲಿನ ಜನ ಬಡಿಯುತ್ತಾರೆ ಎಂದು ತಿಳಿಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಣಸೂರು: ಶಾಲೆ ಚಕ್ಕರ್ ಹೊಡೆದು ಈಜಲು ಹೊರಟವ ನೀರುಪಾಲು; ಪ್ರಾಣ ಉಳಿಸದೆ ಓಡಿ ಹೋದ ಸ್ನೇಹಿತರು
ಎಂಇಎಸ್ ವಿಚಾರದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ರಾಜ್ಯದ 8 ರಾಜಕೀಯ ಪಕ್ಷಗಳಿಗೆ ಗೇಟ್ಪಾಸ್: ಚುನಾವಣ ಆಯೋಗ
ಸಿದ್ದುಗೆ ಕಿಚ್ಚಿಟ್ಟ ಮೂಲ; “ಆರೆಸ್ಸೆಸ್ನವರು ಮೂಲ ಭಾರತದವರೇ?’ ಹೇಳಿಕೆಗೆ ಆಕ್ರೋಶ