ಕಲ್ಲಿನಿಂದ ಜಜ್ಜಿ ನವಜಾತ ಶಿಶು ಹತ್ಯೆ

Team Udayavani, Feb 3, 2019, 1:22 AM IST

ಚಿಕ್ಕಮಗಳೂರು: ಒಂದು ದಿನದ ನವಜಾತ ಶಿಶುವನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಅಮಾನವೀಯ ಕೃತ್ಯ ನಗರದಲ್ಲಿ ನಡೆದಿದೆ. ನಗರದ ಬೇಲೂರು ರಸ್ತೆಯ ಹಳೇ ತಾಲೂಕು ಕಚೇರಿಯ ಬಳಿ ನವಜಾತ ಶಿಶುವಿನ ಮೃತ ದೇಹ ಪತ್ತೆಯಾಗಿದೆ.

ಹೆಣ್ಣು ಶಿಶುವನ್ನು ಬಟ್ಟೆಯಿಂದ ಸುತ್ತಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮಗು ಯಾರಿಗೆ ಸೇರಿದ್ದು, ಯಾರು ಕೊಲೆ ಮಾಡಿದ್ದಾರೆ ಎಂಬ ಯಾವ ವಿವರವೂ ತಿಳಿದು ಬಂದಿಲ್ಲ. ಬಟ್ಟೆಯಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಸಾಡಿ ಹೋಗಿದ್ದ ಶಿಶುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿ ಶಿಶುವಿನ ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ