ಶಿವಮೊಗ್ಗ ಸೇರಿದಂತೆ 3 ರಾಜ್ಯಗಳ 20ಕ್ಕೂ ಹೆಚ್ಚು ಕಡೆ NIA ದಾಳಿ


Team Udayavani, Oct 13, 2021, 11:02 AM IST

fgfjyjhgf

ಶಿವಮೊಗ್ಗ : ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆ ಇವತ್ತು (ಬುಧವಾರ) ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.  ಶೃಂಗೇರಿ, ಕಾರ್ಕಳಕ್ಕೆ ಹೊಂದಿಕೊಂಡಂತೆ ಇರುವ ಶಿವಮೊಗ್ಗದ ಕೆಲವು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಕ್ಸಲ್ ಚಳವಳಿ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯದ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ

ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಿವಮೊಗ, ಚಿಕ್ಕಮಗಳೂರು, ಉಡುಪಿ ಐದು ಕಡೆಯಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೈಲೆಂಟ್ ದಾಳಿ, ಪರಿಶೀಲನೆ

ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ದಾಳಿ ಮಾಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು, ಥೇಣಿ, ರಾಮನಾಥಪುರಂ, ಸೇಲಂ, ಕನ್ಯಾಕುಮಾರಿ, ಕೃಷ್ಣಗಿರಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಕೇರಳದ ವಯನಾಡ್, ತ್ರಿಶೂರ್ ಮತ್ತು ಕಣ್ಣೂರು ಜಿಲ್ಲೆಗಳಲ್ಲೂ ಪರಿಶೀಲಿಸಿದ್ದಾರೆ.

ಏನಿದು ಪ್ರಕರಣ? ಪರಿಶೀಲನೆಗೇನು ಕಾರಣ?

ನಕ್ಸಲ್ (ಸಿಪಿಐ ಮಾವೋವಾದಿ) ಚಳವಳಿಗೆ ಶಕ್ತಿ ತುಂಬಲು 2016ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ತರಬೇತಿ ಕ್ಯಾಂಪ್ ನಡೆಸಲು ನಿರ್ಧರಿಸಲಾಗಿತ್ತು. ಕೇರಳ ರಾಜ್ಯದ ಮಲ್ಲಾಪುರಂ ಜಿಲ್ಲೆಯ ಎಡಕ್ಕರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ತರಬೇತಿ ಶಿಬಿರ ಸ್ಥಳ ಗುರುತಿಸಲಾಗಿತ್ತು.  ಶಿಬಿರದಲ್ಲಿ ಧ್ವಜಾರೋಹಣ ನೆರವೇರಿಸಿ, ಶಸ್ತ್ರಾಸ್ತ್ರ ಬಳಕೆಯ ತರಬೇತಿ ನೀಡಲು ಚಿಂತಿಸಲಾಗಿತ್ತು. ಈ ಸಂಬಂಧ 2017ರಲ್ಲಿ ಕೇರಳದ ಎಡಕ್ಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐವರನ್ನು ಬಂಧಿಸಲಾಗಿತ್ತು.

ಮರು ಎಫ್ ಐ ಆರ್ ದಾಖಲಿಸಿದ ಎನ್ಐಎ

ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಎನ್ಐಎ ಅಧಿಕಾರಿಗಳು ಮರು ಎಫ್ಐಆರ್ ದಾಖಲು ಮಾಡಿಕೊಂಡರು. ಪ್ರಕರಣದಲ್ಲಿ ಇನ್ನೂ 20 ಮಂದಿ ಇರುವುದು ಬೆಳಕಿಗೆ ಬಂದಿತ್ತು. ಕರ್ನಾಟಕ ನಕ್ಸಲ್ ಚಳವಳಿಯ ಮುಂಚೂಣಿ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ, ವಿಕ್ರಂ ಗೌಡ ಅವರ ಹೆಸರುಗಳು ಈ ಪಟ್ಟಿಯಲ್ಲಿತ್ತು. ಹಾಗಾಗಿ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿ, ಹೊಸನಗರದ ಕೆಲವು ಕಡೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.