ಗುಪ್ತಚರ ವರದಿ ಅಷ್ಟೊಂದು ಸಸ್ತಾ ಆಗೋಗಿದೆಯೇ?;ಸುರೇಶ್ ಕುಮಾರ್
Team Udayavani, Nov 21, 2018, 12:38 PM IST
ಬೆಂಗಳೂರು: ಗುಪ್ತಚರ ವರದಿ ಕುರಿತಾಗಿ ನಿಖಿಲ್ ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಬೇಕು ಎಂದು ಮಾಜಿ ಸಚಿವ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.
ಸುರೇಶ್ ಕುಮಾರ್ ಅವರು ನಿಖಿಲ್ ನೀಡಿರುವ ಹೇಳಿಕೆಯ ವಿಡಿಯೋ ಟ್ವೀಟ್ ಮಾಡಿ ಮುಖ್ಯಮಂತ್ರಿಗಳ ಸ್ಪಷ್ಟನೆ ಕೋರಿದ್ದಾರೆ.
‘ಗುಪ್ತಚರ ವರದಿ ಅಷ್ಟು ಸಸ್ತಾ ಆಗೋಗಿದೆಯೇ? ಗುಪ್ತಚರ ವರದಿ ಸಿಗೋದಕ್ಕೆ ನಿಖಿಲ್ ಕುಮಾರಸ್ವಾಮಿಯವರ “ಅಧಿಕಾರ” ಏನು? ಮುಖ್ಯಮಂತ್ರಿಗಳ ಮಗನಾಗಿದ್ದಕ್ಕೆ ಈ ಮಹದವಕಾಶವೇ? ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು’ಎಂದು ಬರೆದಿದ್ದಾರೆ.
ಗುಪ್ತಚರ ವರದಿ ಅಷ್ಟು ಸಸ್ತಾ ಆಗೋಗಿದೆಯೇ? ಗುಪ್ತಚರ ವರದಿ ಸಿಗೋದಕ್ಕೆ ನಿಖಿಲ್ ಕುಮಾರಸ್ವಾಮಿಯವರ “ಅಧಿಕಾರ” ಏನು? ಮುಖ್ಯಮಂತ್ರಿಗಳ ಮಗನಾಗಿದ್ದಕ್ಕೆ ಈ ಮಹದವಕಾಶವೇ? ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು. pic.twitter.com/bgqEtAxouM
— Sureshkumar (@nimmasuresh) November 21, 2018
‘ಮುಖ್ಯಮಂತ್ರಿಯೇ ? ಗ್ರಹ ಮಂತ್ರಿಯೇ? ಅಪ್ಪ ಮಕ್ಕಳ ರಾಜಕಾರಣದಲ್ಲಿ ಕಾನೂನು ಕಾಲ ಕಸ’ ಎಂದು ವಿಡಿಯೋದಲ್ಲಿ ಬರೆಯಲಾಗಿದೆ.
ಬೆಳಗಾವಿ ರೈತರ ಉಗ್ರ ಪ್ರತಿಭಟನೆಯ ಕುರಿತು ಮಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡುವ ವೇಳೆ ನಿಖಿಲ್ ‘ನಮಗೆ ಬಂದಂತಹ ಇಂಟಲಿಜೆನ್ಸ್ ಪ್ರಕಾರ’ ಎಂದಿದ್ದರು. ಈ ಹೇಳಿಕೆ ವಿರುದ್ಧ ಸುರೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ