ಇಲ್ಲಿಯವರೆಗೆ ಒಂದು ರಾಜಕಾರಣ ಇನ್ಮುಂದೆ ನಿಜವಾದ ರಾಜಕಾರಣ ಆರಂಭ: ನಿಖಿಲ್ ಕುಮಾರಸ್ವಾಮಿ
Team Udayavani, Jan 4, 2021, 4:46 PM IST
ಬೆಂಗಳೂರು: ಇಲ್ಲಿಯವರೆಗೂ ಒಂದು ರೀತಿಯ ರಾಜಕಾರಣ ನಡೆಯಿತು. ಇನ್ನು ಮುಂದಿನ ದಿನಗಳಲ್ಲಿ ನಿಜವಾದ ರಾಜಕಾರಣ ಆರಂಭವಾಗಲಿದೆ. ಪಕ್ಷದ ಯಾರೊಬ್ಬರೂ ನಿರುತ್ಸಾಹಿಗಳಾಗದೆ ಕೆಲಸ ಮಾಡಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಪಕ್ಷದ ಯುವ ಸಂಘಟನಾ ಸಭೆಯಲ್ಲಿ ಮಾತನಾಡಿದ ನಿಖಿಲ್, ಜೆಡಿಎಸ್ ಪಕ್ಷದ ಬಗ್ಗೆ ಹಲವು ರೀತಿಯ ಚರ್ಚೆಗಳಾಗುತ್ತಿವೆ. ಯಾವುದೇ ಕಾರಣಕ್ಕೂ ಪಕ್ಷವನ್ನ ವಿಲೀನ ಮಾಡುವ ಸಂದರ್ಭ ಬರುವುದಿಲ್ಲ. ಯಾವ ಪಕ್ಷದ ಜೊತೆಗೂ ನಮ್ಮ ಪಕ್ಷವನ್ನ ವಿಲೀನ ಮಾಡುವುದಿಲ್ಲ. ಇದನ್ನ ನಾನು ಮತ್ತೆ ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ ಎಂದರು.
ಯಾರೂ ಉತ್ಸಾಹ ಕಳೆದುಕೊಳ್ಳಬೇಡಿ. ನಾವು ನಿಮ್ಮ ಜೊತೆ ಇದ್ದೇವೆ. ತಳಮಟ್ಟದಲ್ಲಿ ಪಕ್ಷ ಸಾಕಷ್ಟು ಸದೃಢವಾಗಿದೆ. ಗ್ರಾಮ ಪಂಚಾಯ್ತಿ ಚುನಾವಣೆಯೇ ಇದಕ್ಕೆ ಸಾಕ್ಷಿ ಎಂದು ನಿಖಿಲ್ ಹೇಳಿದರು.
ಇದನ್ನೂ ಓದಿ:ದೇವೇಗೌಡ್ರು ಏನೂಂತ ಗೊತ್ತಾ.. ಪಿಎಂ ಆಗಿದ್ದಾಗ ಗುಜರಾತ್ ಸರ್ಕಾರವನ್ನೇ ವಜಾ ಮಾಡಿದ್ದೆ!
ಮುಂಬರುವ ಚುನಾವಣೆಗಳಲ್ಲಿ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದ ಅವರು, ಮತ್ತೊಮ್ಮೆ ಕುಮಾರಣ್ಣ ಸಿಎಂ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಿ ಪಕ್ಷ ಸಂಘಟಿಸಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶುಭ ಕೋರುತ್ತೇನೆ : ಇಡಿ ಹೊಸ ಚಾರ್ಜ್ ಶೀಟ್ ಗೆ ಡಿಕೆಶಿ ವ್ಯಂಗ್ಯವಾಗಿ ಆಕ್ರೋಶ
ಪರಮೇಶ್ವರ್ ರನ್ನು ಸೋಲಿಸಲು ಸಿದ್ದರಾಮಯ್ಯ ಜೊತೆ ಡಿಕೆಶಿ ಕೈಜೋಡಿಸಲಿದ್ದಾರೆ: ಬಿಜೆಪಿ
ಡಿಕೆಶಿ ವಿರುದ್ಧ ಚಾರ್ಜ್ ಶೀಟ್: ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ ಎಂದ ಡಿ.ಕೆ ಸುರೇಶ್
ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ
ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ