ಮಂಡ್ಯದಲ್ಲಿ ರಂಗೇರಿದ ಕಣ:ಜಿಲ್ಲೆಯಲ್ಲೇ ಮನೆ ಮಾಡುವೆ;ನಿಖಿಲ್
Team Udayavani, Mar 3, 2019, 2:06 PM IST
ಮಂಡ್ಯ: ಮೈತ್ರಿ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ಘೋಷಣೆಯಾಗುವ ಮುನ್ನ ಜೆಡಿಎಸ್ ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಚುನಾವಣಾ ಕಣ ರಂಗೇರಿದೆ.
ರೆಬೆಲ್ ಸ್ಟಾರ್ ಅಂಬರೀಷ್ ಅವರ ಪತ್ನಿ ಸುಮಲತಾ ಅವರು ಕಾಂಗ್ರೆಸ್ ಟಿಕೆಟ್ ಪಡೆಯಲು ಯತ್ನಿಸುತ್ತಿರುವ ವೇಳೆಯಲ್ಲೇ ಜೆಡಿಎಸ್ನ ಘೋಷಣೆ ಮೈತ್ರಿಯಲ್ಲಿ ಬಂಡಾಯದ ಸ್ಪಷ್ಟ ಸೂಚನೆ ನೀಡಿದೆ. ಸುಮಲತಾ ಅವರು ಪಕ್ಷೇತರರಾಗಿ ಕಣಕ್ಕಿಳಿಯುವ ಸಾಧ್ಯತೆಗಳಿದ್ದು, ಬಿಜೆಪಿ ಅವರಿಗೆ ಬೆಂಬಲ ನೀಡುವ ಸಾಧ್ಯತೆಗಳಿವೆ.
ಮಂಡ್ಯದಲ್ಲಿ ಭಾನುವಾರ ಮಾತನಾಡಿದ ನಿಖಿಲ್, ನಾನು ವರಿಷ್ಠರಿಗೆ ಅಭಾರಿಯಾಗಿದ್ದೇನೆ.ಜಿಲ್ಲೆಯ ಜನರ ಭಾವನೆಗಳಿಗೆ ಅನುಗುಣವಾಗಿ ನನ್ನ ಹೆಸರು ಘೋಷಿಸಿದ್ದಾರೆ.ಮುಂದಿನ ದಿನಗಳಲ್ಲಿ ಮಂಡ್ಯದಲ್ಲೇ ನಾನು ಮನೆ ಮಾಡುತ್ತೇನೆ ಎಂದು ಹೇಳಿ ಜೆಡಿಎಸ್ ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ.
ಈ ಬಾರಿ ಮಂಡ್ಯ ಕಣ ಮುಖ್ಯಮಂತ್ರಿ ಪುತ್ರ , ಯುವ ನಾಯಕ ನಿಖಿಲ್ ಮತ್ತು ಅಪಾರ ಅಭಿಮಾನಿಗಳನ್ನು ಹೊಂದಿರುವ ಅಂಬರೀಷ್ ಅವರ ಪತ್ನಿ ಸುಮಲತಾ ಅವರ ನಡುವಿನ ಜಿದ್ದಾ ಜಿದ್ದಿನ ಕದನಕ್ಕೆ ಸಾಕ್ಷಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್