ಪ್ರಜ್ವಲ್‍ಗೆ ಟ್ವೀಟರ್‍ನಲ್ಲಿ ಶುಭ ಕೋರಿದ ನಿಖಿಲ್

Team Udayavani, Jun 23, 2019, 3:00 AM IST

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಟ್ವೀಟ್‌ ಮೂಲಕ ಅವರಿಗೆ ಶುಭ ಕೋರಿದ್ದಾರೆ. ಹಾಸನ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಸಂಸತ್ತಿನಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ ಮಾಡಿದ ಆತ್ಮೀಯ ಸಹೋದರ ಪ್ರಜ್ವಲ್‌ ರೇವಣ್ಣ ಅವರಿಗೆ ಶುಭ ಕೋರುತ್ತೇನೆ.

ಅವರು ನಮ್ಮ ನೆಲ-ಜಲ, ಭಾಷೆ, ರೈಲ್ವೆ ಯೋಜನೆ ಹಾಗೂ ನಮ್ಮ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಸಮರ್ಥವಾಗಿ ಧ್ವನಿ ಎತ್ತುವ ಮೂಲಕ ಪ್ರಾದೇಶಿಕ ಹಿತಾಸಕ್ತಿಯನ್ನು ರಕ್ಷಿಸುವ ಪ್ರಜಾಸತ್ತಾತ್ಮಕ ಹೋರಾಟ ನಡೆಸಲಿದ್ದಾರೆಂಬ ನಂಬಿಕೆ ನನ್ನದು ಎಂದು ಅವರು ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ