ನೀರಾ ಕುಡಿದ ಸಿದ್ದರಾಮಯ್ಯ, ಶಾಸಕರು
Team Udayavani, Mar 6, 2020, 3:05 AM IST
ವಿಧಾನಸೌಧದಲ್ಲಿ ಬಜೆಟ್ ಮಂಡನೆ ನಂತರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಬಹುತೇಕ ಶಾಸಕರು ವಿಧಾನಸೌಧದ ಮೊಗಸಾಲೆಯಲ್ಲಿ ನೀರಾ ಕುಡಿದು ಖುಷಿ ಪಟ್ಟರು. ಖಾಸಗಿ ಸಂಸ್ಥೆಯೊಂದು ತಯಾರಿಸಿದ್ದ ನೀರಾ ತಂಪು ಪಾನೀಯವನ್ನು ಮಾಜಿ ಶಾಸಕ ಮನೋಹರ್ ಮಸ್ಕಿ ಎಲ್ಲಾ ಶಾಸಕರಿಗೂ ನೀರಾ ಬಾಟಲ್ ನೀಡಿ ಕುಡಿದು ನೋಡುವಂತೆ ಮನವೊಲಿಕೆ ಮಾಡುತ್ತಿದ್ದರು.
ಕೆಲವು ಶಾಸಕರಿಗೆ ನೀರಾ ಬಗ್ಗೆ ಅನುಮಾನ ಇದ್ದರಿಂದ ಕುಡಿಯಲು ಹಿಂದೇಟು ಹಾಕುತ್ತಿದ್ದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿ ಆಡಳಿತ ಹಾಗೂ ಪ್ರತಿಪಕ್ಷದ ಬಹುತೇಕ ಶಾಸಕರಿಗೆ ಅವರೇ ನೀರಾ ಕುಡಿಯುವಂತೆ ಮನವಿ ಮಾಡಿಕೊಳ್ಳುತ್ತಿದ್ದರು. ಕೆಲವು ಶಾಸಕರು ಬಾಟಲ್ಗಳನ್ನು ಎತ್ತಿ ಕುಡಿದು ಅದರ ಟೇಸ್ಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಅನುಮಾನದಿಂದಲೇ ಬಾಟಲ್ ಕೈಗೆತ್ತಿಕೊಂಡು ನೀರಾ ಕುಡಿದರು. ಅಲ್ಲದೇ ನಾನೇ ಬಜೆಟ್ನಲ್ಲಿ ಘೋಷಣೆ ಮಾಡಿದ್ದೆ. ಇದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ಪೂರ್ಣ ಬಾಟಲ್ ಕುಡಿದು ಮುಗಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್