ಆ.15 ರೊಳಗೆ ಇ-ಕಚೇರಿಯನ್ನಾಗಿ ಪರಿವರ್ತಿಸಲು ಅಧಿಕಾರಿಗಳಿಗೆ ನಿರಾಣಿ ತಾಕೀತು

ಅಧಿಕಾರಿಗಳ ಅಸಡ್ಡೆತನ ಸಹಿಸುವುದಿಲ್ಲ, ರೈತರಿಗೆ 90 ದಿನದೊಳಗೆ ಪರಿಹಾರಕ್ಕೆ ತಾಕೀತು

Team Udayavani, Jul 2, 2022, 6:51 PM IST

nirani

ಬೆಂಗಳೂರು : ಆಗಸ್ಟ್ 15 ರೊಳಗೆ ವಾಣಿಜ್ಯ ಕೈಗಾರಿಕಾ ಇಲಾಖೆ ವ್ಯಾಪ್ತಿಗೆ ಒಳಪಡುವ ಜಿಲ್ಲಾ ಮತ್ತು ತಾಲೂಕು ಮಟ್ಟದ ಕಚೇರಿಗಳನ್ನು ಇ-ಕಚೇರಿ ವ್ಯವಸ್ಥೆ( E- office )ಗಳನ್ನಾಗಿ ಪರಿವರ್ತನೆ ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶನಿವಾರ ವಿಕಾಸೌಧದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರು ಎಸ್.ಎಲ್‍ಒಗಳು ಕೆಎಸ್‍ಎಸ್‍ಐಡಿಸಿ ಅಧಿಕಾರಿಗಳ ಒಳಗೊಂಡ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
ಒಂದು ವೇಳೆ ಆಗಸ್ಟ್ 15ರೊಳಗೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಇ ಕಚೇರಿ ವ್ಯವಸ್ಥೆಗಳನ್ನಾಗಿ ಪರಿವರ್ತನೆ ಮಾಡದೇ ಇದ್ದರೆ ಮುಖ್ಯ ಕಚೇರಿಗೆ ಬರುವ ಭೌತಿಕ ಕಡತಗಳನ್ನು ಸ್ವೀಕಾರ ಮಾಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.

ಕಂಪ್ಯೂಟರ್ ಇಲ್ಲ, ಸಿಬ್ಬಂದಿ ಇಲ್ಲ, ಕಚೇರಿ ಇಲ್ಲ ಇಂತಹ ಸಬೂಬುಗಳನ್ನು ಹೇಳಬಾರದು. ಇದಕ್ಕೆ ಬೇಕಾದ ಪೂರ್ವ ಸಿದ್ದತೆಗಳನ್ನು ಇಂದಿನಿಂದಲೇ ತಯಾರು ಮಾಡಿಕೊಳ್ಳಿ. ಇಲ್ಲದಿದ್ದರೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಿಂದ ಬರುವ ಭೌತಿಕ ಕಡತಗಳನ್ನು ಹಿಂದಕ್ಕೆ ಕಳುಹಿಸುವುದಾಗಿ ಅಕಾರಿಗಳಿಗೆ ನಿರಾಣಿ ಎಚ್ಚರಿಸಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಎಲ್ಲಾ ಇಲಾಖೆಗಳಿಗೆ ಮಾತೃ ಇಲಾಖೆಯಿದ್ದಂತೆ. ಏನೇ ಹೊಸ ಆವಿಷ್ಕಾರುಗಳು, ಸಂಶೋಧನೆಗಳು ನಡಯುವುದಿದ್ದರೆ ಮೊದಲು ನಮ್ಮ ಇಲಾಖೆಯಿಂದಲೇ ನಡೆಯಬೇಕು. ಇಂತಹ ಸಂದರ್ಭದಲ್ಲಿ ನಮ್ಮ ಇಲಾಖೆಯ ಕಚೇರಿಗಳು ಇ ಕಚೇರಿಗಳು ಆಗದಿದ್ದರೆ ಹೇಗೆ ಎಂದು ನಿರಾಣಿ ಪ್ರಶ್ನಿಸಿದರು.

ಸಣ್ಣಪುಟ್ಟ ದೋಷಗಳನ್ನು ಮುಂದಿಟ್ಟುಕೊಂಡು ಕಡತ ವಿಲೇವಾರಿಯನ್ನು ವಿಳಂಬ ಮಾಡಬೇಡಿ. ವಿಳಂಬ ಮಾಡಿದರೆ ಉದ್ದಿಮೆದಾರರು ಕರ್ನಾಟಕಕ್ಕೆ ಬರಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು. ವಿಳಂಬವಾದಷ್ಟು ಉದ್ಯಮಿಗಳು ಬೇರೆ ರಾಜ್ಯದೆಡೆ ಗಮನಹರಿಸುತ್ತಾರೆ. ಇದಕ್ಕೆ ಅವಕಾಶ ನೀಡಬೇಡಿ ಎಂದರು.

ಜಿಲ್ಲಾ ಮಟ್ಟದಲ್ಲಿ ಕೈಗಾರಿಕಾ ಉದ್ದೇಶಗಳಿಗೆ ಅನೇಕ ವರ್ಷಗಳಿಂದ ಜಮೀನು ಪಡೆದವರು ಅದನ್ನು ಸದ್ಬಳಿಕೆ ಮಾಡಿಕೊಂಡಿಲ್ಲ. ಈ ಬಗ್ಗೆ ನನಗೆ ಸಾಕಷ್ಟು ಲಿಖಿತ ದೂರುಗಳು ಬಂದಿವೆ. ಹೀಗಾಗಿ ಎಲ್ಲೆಲ್ಲಿ ಜಮೀನನ್ನು ಬಳಕೆ ಮಾಡಿಲ್ಲವೋ ಅದನ್ನು ತಕ್ಷಣವೇ ಆಡಿಟ್ ಮಾಡುವಂತೆ ಅಕಾರಿಗಳಿಗೆ ನಿರಾಣಿ ಸೂಚಿಸಿದರು.

ಕೆಐಎಡಿಬಿಯಿಂದ ಜಮೀನು ಪಡೆದುಕೊಂಡು ಕೈಗಾರಿಕೆಗಳನ್ನು ಸ್ಥಾಪನೆ ಮಾಡದೇ ಹಾಗೆ ಉಳಿಸಿಕೊಂಡಿದ್ದಾರೆ. ಅಂತಹ ಜಮೀನನ್ನು ತಕ್ಷಣವೇ ಗುರುತಿಸಬೇಕು. ಬಳಕೆಯಾಗದ ಭೂಮಿಯನ್ನು ನಾವು ಹಿಂಪಡೆದುಕೊಳ್ಳುತ್ತೇವೆ ಎಂದು ನಿರಾಣಿ ತಿಳಿಸಿದರು.

90 ದಿನದೊಳಗೆ ಪರಿಹಾರ ನೀಡಿ
ರೈತ ಭೂಕಂದಾಯ ದಾಖಲೆಗಳು ಕಾನೂನಾತ್ಮಕವಾಗಿದ್ದರೆ, ಕೆಐಎಡಿಬಿಯಿಂದ ಸ್ವಾಧೀನಮಾಡಿಕೊಂಡ ಜಮೀನುಗಳಿಗೆ ಮೂರು ತಿಂಗಳಲ್ಲಿ ಪರಿಹಾರ ನೀಡಬೇಕು ಎಂದು ಸಚಿವ ನಿರಾಣಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೆಲವು ಕಡೆ ಜಮೀನನ್ನು ಸ್ವಾಧೀನಪಡಿಸಿಕೊಂಡರೂ ರೈತರಿಗೆ ಪರಿಹಾರ ನೀಡದೆ ವಿಳಂಬ ಮಾಡಿಲಾಗಿದೆ ಎಂಬ ಆರೋಪವಿದೆ‌. ದಾಖಲೆಗಳು ಸರಿ ಇದ್ದರೆ, 90 ದಿನದೊಳಗೆ ಪರಿಹಾರ ನೀಡಲು ಇರುವ ಸಮಸ್ಯೆಯಾದರೂ ಏನು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಸಣ್ಣ ಕೈಗಾರಿಕಾ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಇತ್ತೀಚೆಗೆ ಸಣ್ಣ ಕೈಗಾರಿಕೆ ಇಲಾಖೆಗೂ ಭೂಮಿ ನೀಡುವಂತೆ ಮನವಿ ಬಂದಿದೆ. ಕೆಎಐಡಿಬಿಯಲ್ಲಿ ನಮಗೆ ಜಮೀನು ನೀಡಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನಿರಾಣಿ ಅವರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಈ.ವಿ.ರಮಣರೆಡ್ಡಿ, ಇಲಾಖೆಯ ‌ಆಯುಕ್ತೆ, ಗುಂಜನ್ ಕೃಷ್ಣ, ಕೆಐಎಡಿಬಿಯ ಸಿಇಒ ಎನ್. ಶಿವಶಂಕರ, ಎಂಎಸ್‍ಎಂಇ ನಿರ್ದೇಶಕಿ ಸತ್ಯಭಾಮ, ಕೆಎಸ್‍ಎಸ್ ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಸೋಮಶೇಕರ್ ಮತ್ತಿರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.