ಜೆಡಿಎಸ್ ಜತೆ ಮೈತ್ರಿ ಇಲ್ಲ: ಸಿಎಂ ಸ್ಪಷ್ಟನೆ
Team Udayavani, Nov 29, 2017, 8:36 AM IST
ಬೆಂಗಳೂರು: “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕಾರ್ಯಕರ್ತರು, ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ವದಂತಿ ಕುರಿತಂತೆ ಪ್ರಶ್ನಿಸಿದಾಗ, “ಚನ್ನಪಟ್ಟಣ ಮಾತ್ರವಲ್ಲ, ರಾಜ್ಯದ ಯಾವುದೇ ಭಾಗದಲ್ಲೂ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದರು.
ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣ ಅಭಿವೃದ್ಧಿಗೆ ತಾವೇ ಕಾರಣ ಎಂದು ಹೇಳಿಕೊಂಡು ಹೋಗುತ್ತಿದ್ದಾರೆ. ಇದರಿಂದ ಕಾಂಗ್ರೆಸ್ಗೆ ಹಿನ್ನಡೆಯಾಗುತ್ತಿದೆ ಎಂಬ ಕಾರ್ಯಕರ್ತರ ಆತಂಕಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಯೋಗೇಶ್ವರ್ ಈ ಹಿಂದೆ ಕಾಂಗ್ರೆಸ್ ಸಹ ಸದಸ್ಯನಾಗಿದ್ದರಿಂದ ಈ ಬಗ್ಗೆ ಮೌನವಾಗಿದ್ದೆ. ಈಗ ಅವರು ಬಿಜೆಪಿ ಸೇರಿದ್ದಾರೆ. ಆದರೆ, ಅವರು ಕ್ಷೇತ್ರದಲ್ಲಿ ಏನೇ ಕೆಲಸ ಮಾಡಿದ್ದರೂ ಸ್ವಂತ ಹಣದಿಂದ ಮಾಡಿದ್ದಲ್ಲ, ಸರ್ಕಾರದ ಅನುದಾನದಿಂದ. ಡಿ. 12ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಚನ್ನಪಟ್ಟಣಕ್ಕೆ ಬರುತ್ತಿದ್ದೇನೆ. ಅಲ್ಲಿ ಸರ್ಕಾರದ ಕೊಡುಗೆಗಳನ್ನು ಯೋಗೇಶ್ವರ್ ಮುಂದೆಯೇ
ಹೇಳುತ್ತೇನೆ’ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್