
ಪವರ್ ಸೆಂಟರ್ ಇಲ್ಲ: ಡಿ.ಕೆ. ಶಿವಕುಮಾರ್
Team Udayavani, Mar 12, 2020, 3:02 AM IST

ಬೆಂಗಳೂರು: ಪಕ್ಷದಲ್ಲಿ ಪವರ್ ಸೆಂಟರ್ ಎನ್ನುವುದು ಇಲ್ಲ. ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮಾಡಬೇಕು ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಬುಧವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನನ್ನ ಮೇಲೆ ದೊಡ್ಡ ನಂಬಿಕೆ ಇಟ್ಟು ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರುಗಳು ನನಗೆ ಈ ಜವಾಬ್ದಾರಿಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕೈಯಲ್ಲಿ ಕೊಡಿಸಿದ್ದಾರೆ.
1975ರಲ್ಲೇ ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ. ರಾಜೀವ್ ಗಾಂಧಿ ಅವರು ನನ್ನನ್ನು ಗುರುತಿಸಿ ವಿಧಾನಸೌಧದಲ್ಲಿ ನೀನು ಇರಬೇಕು ಎಂದು ಪಕ್ಷದ ಟಿಕೆಟ್ ಕೊಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತ ಬಂದಿದ್ದೇನೆ. ಅಲ್ಲಿಂದ ಇಲ್ಲಿಯವರೆಗೆ ಶಾಸಕನಾಗಿ, ಮಂತ್ರಿಯಾಗಿ, ಪಕ್ಷದ ಕಾರ್ಯಾ ಧ್ಯಕ್ಷನಾಗಿ, ಇವತ್ತು ಅಧ್ಯಕ್ಷನಾಗಿ ಘೋಷಣೆಯಾಗಿ ದ್ದರೂ ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ. ಇವತ್ತೂ ಕಾರ್ಯಕರ್ತನೇ, ನಾಳೆಯೂ ಕಾರ್ಯಕರ್ತನೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
