ರಾಜೀನಾಮೆ ಹೇಳಿಕೆ ನೀಡಿಲ್ಲ
Team Udayavani, Feb 24, 2020, 3:02 AM IST
ದಾವಣಗೆರೆ: ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡದೇ ಇದ್ದರೆ ರಾಜೀನಾಮೆ ಕೊಡುವುದಾಗಿ ಹೇಳಿಕೆ ನೀಡಿಲ್ಲ ಎಂದು ಜಲಸಂಪನ್ಮೂಲ ಸಚಿವರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಭಾನುವಾರ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡದೇ ಇದ್ದರೆ ರಾಜೀನಾಮೆ ಕೊಡುವುದಾಗಿ ಹೇಳಿಯೇ ಇಲ್ಲ.
ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಯಾರಿಗೆ ಸ್ಪಷ್ಟೀಕರಣ ನೀಡಬೇಕೋ ಅವರಿಗೆ ನೀಡುತ್ತೇನೆ. ನೀವು (ಮಾಧ್ಯಮದವರು) ಗೊಂದಲ ಮಾಡಬೇಡಿ. ಮಹೇಶ್ ಕುಮಟಳ್ಳಿ ಅವರಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುತ್ತದೆ. ಈಗ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ಕೊಟ್ಟರೆ ಸಂತೋಷವಾಗುತ್ತದೆ ಎಂದರು.