ನಾಮಪತ್ರ ಪರ್ವ: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು
Team Udayavani, Jun 18, 2020, 1:03 PM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಇಂದು ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಿಂದ ಬಿ.ಕೆ ಹರಿಪ್ರಸಾದ್, ಜೆಡಿಎಸ್ ನಿಂದ ಗೋವಿಂದರಾಜು, ಪಕ್ಷೇತರ ಅಭ್ಯರ್ಥಿಯಾಗಿ ಯಡವನಹಳ್ಳಿ ಪಿ.ಸಿ.ಕೃಷ್ಣೇಗೌಡ ಇಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದಿಂದ ಬಿ.ಕೆ.ಹರಿಪ್ರಸಾದ್ ಅವರು ನಾಮಪತ್ರ ಸಲ್ಲಿಸುವ ವೇಳೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿಯವರು ಹಾಜರಿದ್ದರು.
ವಿಧಾನಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಯಡವನಹಳ್ಳಿ ಪಿ.ಸಿ.ಕೃಷ್ಣೇಗೌಡ ಅವರು ಇಂದು ನಾಮಪತ್ರ ಸಲ್ಲಿಸಿದರು.
ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಗೋವಿಂದರಾಜು ನಾಮಪತ್ರ ಸಲ್ಲಿಕೆ ನಡಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವರಾದ ಬಸವರಾಜ ಹೊರಟ್ಟಿ, ಶ್ರೀನಿವಾಸಗೌಡ ಸಾಥ್ ನೀಡಿದರು.