ಅಸಹಜ ಸಾವಿನ ಆಡಿಟ್‌ಗೆ ಸೂಚನೆ
Team Udayavani, Jun 14, 2020, 6:55 AM IST
ರಾಯಚೂರು: ಕೋವಿಡ್ 19 ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಘಟಿಸುವ ಪ್ರತಿಯೊಂದು ಅಸಹಜ ಸಾವಿನ ಆಡಿಟ್ ಮಾಡಲು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ತಜ್ಞ ವೈದ್ಯರ ತಂಡ ರಚಿಸಿದ್ದು, ಅಸಹಜ ಸಾವು ಘಟಿಸಿದಲ್ಲಿ ಅದರ ನಿಖರ ಕಾರಣ ವರದಿ ಸಿದ್ಧಪಡಿಸಲು ತಿಳಿಸಲಾಗಿದೆ.
ರಾಜ್ಯದಲ್ಲಿ ಸದ್ಯಕ್ಕೆ ಕೋವಿಡ್ 19 ನಿಯಂತ್ರಣದಲ್ಲಿದ್ದು, ಭಯಪಡುವ ಅಗತ್ಯವಿಲ್ಲ. ಈವರೆಗೆ ಪತ್ತೆಯಾದ ಪಾಸಿಟಿವ್ ಪ್ರಕರಣಗಳಲ್ಲಿ ಶೇ.52.08 ರೋಗಿಗಳು ಗುಣಮುಖರಾಗಿದ್ದಾರೆ. ಶೇ.95ರಷ್ಟು ರೋಗಿಗಳಲ್ಲಿ ಕಾಯಿಲೆ ಲಕ್ಷಣಗಳೇ ಇಲ್ಲ. ಶೇ.5ರಷ್ಟು ರೋಗಿಗಳು ಮಾತ್ರ ತೀವ್ರತರ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ವೈದ್ಯರು ಉದ್ದೇಶಪೂರ್ವಕವಾಗಿ ಸೇವೆಯಿಂದ ವಿಮುಖರಾದರೆ ಮಾತ್ರ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ರಾಜ್ಯದಲ್ಲಿ ಕೋವಿಡ್ 19 ಕೆಲಸಕ್ಕೆ ನಿಯೋಜನೆಗೊಂಡವರಿಗೆ ಸೋಂಕು ತಗುಲಿಲ್ಲ.
ಆದರೆ, ರಿಮ್ಸ್‌ನಲ್ಲಿ ನಾಲ್ವರು ನರ್ಸ್‌ಗಳಿಗೆ ಹೇಗೆ ಬಂತು? ಈ ಕುರಿತು ಸಂಪೂರ್ಣ ವಿವರ ನೀಡುವಂತೆ ರಿಮ್ಸ್ ನಿರ್ದೇಶಕರಿಗೆ ತಿಳಿಸಿದರು. ಈಗ ರೋಗದ ಲಕ್ಷಣ ಇದ್ದವರಿಗೆ ಮಾತ್ರ ತಪಾಸಣೆ ಮಾಡುವಂತೆ ತಿಳಿಸಲಾಗಿದೆ. ಹೊರ ರಾಜ್ಯದಿಂದ ಬಂದವರನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಲಾಗುವುದು. ರಾಜ್ಯದಲ್ಲಿ 40 ಸರ್ಕಾರಿ ಹಾಗೂ 31 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಮಾದರಿ ಪರೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ