ಮೆರಿಟ್, ರೋಸ್ಟರ್ ಪದ್ಧತಿ ಅನುಸಾರ ಪ್ರವೇಶಾತಿಗೆ ಸೂಚನೆ
Team Udayavani, Sep 9, 2020, 10:55 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020-21ನೇ ಸಾಲಿನ ಆನ್ಲೈನ್ ದಾಖಲಾತಿ ಸಂಬಂಧ ಮೆರಿಟ್ ಹಾಗೂ ರೋಸ್ಟರ್ ಪಟ್ಟಿ ಅಂತಿಮಗೊಳಿಸಿ ಪ್ರವೇಶಾತಿ ನೀಡಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಪ್ರವೇಶಾತಿಗೆ ಸಂಬಂಧಿಸಿದ ಕ್ರಮಗಳ ಕುರಿತು ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಆದ್ಯತೆ ಮೇರೆಗೆ ಕಾಲೇಜುವಾರು ಮೆರಿಟ್ ಹಾಗೂ ರೋಸ್ಟರ್ ಅನ್ವಯ ಪಟ್ಟಿಯನ್ನು ಸಿದ್ಧಪಡಿಸಿ ಎರಡು ಹಂತಗಳಲ್ಲಿ ಕಾಲೇಜುಗಳಿಗೆ ರವಾನಿಸಲಾಗಿದೆ. ಇದರನ್ವಯ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಬೇಕು ಎಂದು ಪ್ರಾಂಶು ಪಾಲರಿಗೆ ಸೂಚಿಸಲಾಗಿದೆ. ಆನ್ಲೈನ್ನಲ್ಲಿ ವಿದ್ಯಾರ್ಥಿಗಳು ಸಲ್ಲಿಸುವ ಅರ್ಜಿಗಳ ಕಾಲೇಜುವಾರು ಮೆರಿಟ್, ರೋಸ್ಟರ್ ಪಟ್ಟಿಯನ್ನು ಮುಂದಿನ ಹಂತದಲ್ಲಿ ಕೇಂದ್ರ ಕಚೇರಿಯಿಂದ ಕಾಲೇಜುಗಳಿಗೆ ಬಿಡು ಗಡೆ ಮಾಡಲಾಗುವುದಿಲ್ಲ. ಅಲ್ಲದೆ, ಸಲ್ಲಿಕೆಯಾದ ಅರ್ಜಿಗಳನ್ನು ಕಾಲೇ ಜಿನ ಪ್ರವೇಶಾತಿ ಪೋರ್ಟಲ್ಗಳಲ್ಲಿ ನೇರವಾಗಿ ದೊರೆಯುವಂತೆ ಮಾಡಬೇಕು. ಸ್ವೀಕೃತ ಎಲ್ಲ ಅರ್ಜಿಗಳನ್ನು ಕಾಲೇಜು ಹಂತದಲ್ಲೇ ಪರಿಶೀಲಿಸಿ ಪ್ರವೇಶ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ