ವಸತಿ ಯೋಜನೆ ಮಂಜೂರಾತಿಗೆ ಸೂಚನೆ
Team Udayavani, May 16, 2020, 4:26 AM IST
ಬೆಂಗಳೂರು: ವಸತಿ ಇಲಾಖೆ ವ್ಯಾಪ್ತಿಯ ಗೃಹ ಮಂಡಳಿ ಯೋಜನೆಗಳಿಗೆ ಸ್ಥಳೀಯ ಪ್ರಾಧಿಕಾರಗಳು ಶೀಘ್ರ ಮಂಜೂರಾತಿ ನೀಡುವಂತೆ ವಸತಿ ಸಚಿವ ವಿ.ಸೋಮಣ್ಣ ಸೂಚಿಸಿದ್ದಾರೆ.
ಶುಕ್ರವಾರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕರ್ನಾಟಕ ಗೃಹ ಮಂಡಳಿ ಮೇಲೆ ಸಾರ್ವಜನಿಕರು ಇಟ್ಟಿರುವ ವಿಶ್ವಾಸವನ್ನು ಹೆಚ್ಚಿಸುವ ದೃಷ್ಟಿಯಿಂದ ಹಾಗೂ ಸಾರ್ವಜನಿಕರಲ್ಲಿ ಸರ್ಕಾರಿ ಸಂಸ್ಥೆಗಳ ಬಗ್ಗೆ ಮತ್ತಷ್ಟು ವಿಶ್ವಾಸ ಹೆಚ್ಚಿಸಲು ನೆಲಮಂಗಲ, ಆನೇಕಲ್, ರಾಮನಗರದ ಮಾಗಡಿ ಸ್ಥಳೀಯ ಯೋಜನಾ ಪ್ರಾಧಿಕಾರಗಳು ಶೀಘ್ರ ಮಂಜೂರಾತಿ ನೀಡಿ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು.
ಅನಗತ್ಯ ವಿಳಂಬ ಮಾಡುವ ಅಧಿಕಾರಿಗಳ ವಿರುದ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲಿ ವಸತಿ ಇಲಾಖೆ ಅಧಿಕಾರಿಗಳು ಸ್ಥಳೀಯ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ