ಲೋಕಾಯುಕ್ತ ಮಧ್ಯಂತರ ವರದಿ ಮಂಡನೆಗೆ ಸೂಚನೆ
Team Udayavani, Jun 17, 2020, 7:51 AM IST
ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ವರದಿ ಅನ್ವಯ ವಕ್ಫ್ ಆಸ್ತಿ ದುರ್ಬಳಕೆ ಕುರಿತಂತೆ ಲೋಕಾಯುಕ್ತ ತನಿಖೆ ಮಧ್ಯಂತರ ವರದಿಯನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸ ಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದರು.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಜ್ಯ ವಕ್ಫ್ ಮಂಡಳಿ ಹಾಗೂ ಜವಳಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಕ್ಫ್ ಆಸ್ತಿ ದುರ್ಬಳಕೆ, ಒತ್ತುವರಿ ಸಂಬಂಧ ಅನ್ವರ್ ಮಾಣಿಪ್ಪಾಡಿ ವರದಿ ಅನ್ವಯ ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಲೋಕಾಯುಕ್ತರು ಸಲ್ಲಿಸಿದ್ದ ಮಧ್ಯಂತರ ವರದಿ ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಮುಂದಿನ ಅಧಿವೇಶನದಲ್ಲಿ ವರದಿ ಮಂಡನೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು. ಕೋವಿಡ್- 19 ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಪವಿತ್ರ ಹಜ್ ಯಾತ್ರೆ ಕುರಿತಂತೆ ಸೌದಿ ಅರೇಬಿಯಾದಿಂದ ಯಾವುದೇ ಮಾಹಿತಿ ಸ್ವೀಕೃತಿಯಾಗಿಲ್ಲ. ಪ್ರಸಕ್ತ ವರ್ಷದ ಯಾತ್ರಾರ್ಥಿಗಳು ಮುಂಗಡ ಹಣ ಹಿಂಪಡೆ ಯಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಮೇ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಮೂವರು ನೇಕಾರರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ವಿತರಿಸುವಂತೆ ಯಡಿಯೂರಪ್ಪ ಸೂಚನೆ ನೀಡಿದರು. ಸಚಿವರಾದ ಶ್ರೀಮಂತ ಪಾಟೀಲ್, ಪ್ರಭು ಚವ್ಹಾಣ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಯುಕ್ತ ಎ.ಬಿ.ಇಬ್ರಾಹಿಂ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್ವರರಾವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು