ಬ್ಯಾಕ್ಲಾಗ್ ಹುದ್ದೆ ಭರ್ತಿಗೆ ಸೂಚನೆ
Team Udayavani, Jun 24, 2019, 3:00 AM IST
ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಗುರುತಿಸಲಾಗಿರುವ ಬೋಧಕ ಹಾಗೂ ಬೋಧಕೇತರ ಬ್ಯಾಕ್ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಸಂಬಂಧಪಟ್ಟ ಅನುದಾನಿತ ಕಾಲೇಜುಗಳಿಗೆ ತಿಳಿಸಿದೆ.
ಅನುದಾನಿತ ಕಾಲೇಜುಗಳಲ್ಲಿರುವ ಬ್ಯಾಕ್ಲಾಗ್ ಹುದ್ದೆಗಳಿಗೆ ಅಗತ್ಯ ಕಾರ್ಯಭಾರ ಇಲ್ಲದೆ ಇದ್ದರೆ ಅಂತಹ ವಿಷಯದ ಖಾಲಿ ಹುದ್ದೆಗಳನ್ನು ಕಾರ್ಯಭಾರ ಇರುವ ಅನುದಾನಿತ ವಿಷಯಗಳಿಗೆ ಹುದ್ದೆ ಪರಿವರ್ತಿಸಿ ಭರ್ತಿ ಮಾಡಿಕೊಳ್ಳಬೇಕು. ಜತೆಗೆ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ವಿಧಾನಮಂಡಲದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.
ಇಷ್ಟಾದರೂ ಕೆಲವು ಅನುದಾನಿತ ಕಾಲೇಜುಗಳು ಬ್ಯಾಕ್ಲಾಗ್ ಹುದ್ದೆಯನ್ನು ಭರ್ತಿಮಾಡಿಕೊಳ್ಳದೆ ಇರುವುದನ್ನು ಸಚಿವ ಸಂಪುಟ ಉಪ ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಇದಕ್ಕೆ ಸಂಬಂಧಿಸಿದವರ ಮೇಲೆ ನಿಯಮಾನುಸಾರ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.
ಹೀಗಾಗಿ, ಕಾರ್ಯಭಾರ ಇಲ್ಲದ ಬ್ಯಾಕ್ಲಾಗ್ ಹುದ್ದೆಗಳನ್ನು ಕಾರ್ಯಭಾರವಿರುವ ಕಡೆಗೆ ಪರಿವರ್ತಿಸಿ ಕೂಡಲೇ ಭರ್ತಿ ಮಾಡಿಕೊಳ್ಳಬೇಕು. ಅನುದಾನಿತ ಕಾಲೇಜುಗಳ ಆಡಳಿತ ಮಂಡಳಿ ಈ ಕ್ರಮ ತೆಗೆದುಕೊಳ್ಳದಿದ್ದರೆ ಇಲಾಖೆಯಿಂದಲೇ ವಿಷಯ ಪರಿವರ್ತನೆ ಮಾಡಿ ಬ್ಯಾಕ್ಲಾಗ್ ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು