ಚಾಮುಂಡೇಶ್ವರಿಯಲ್ಲಿ ಸಿಎಂ ಪರ ಒಕ್ಕಲಿಗ ಮುಖಂಡರ ಪ್ರೆಸ್‌ಮೀಟ್!
Team Udayavani, Apr 3, 2018, 3:36 PM IST
ಚಾಮುಂಡೇಶ್ವರಿ: ಮಾಜಿ ಸಚಿವ , ಜಿ.ಟಿ.ದೇವೇಗೌಡ ಅವರ ಎದುರು ಜಯ ಗಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಕ್ಕೊಂದರಂತೆ ರಣತಂತ್ರಗಳನ್ನು ಹಣೆಯುತ್ತಿದ್ದು, ಇದಕ್ಕೆ ಜಾತಿ ರಾಜಕೀಯವೂ ಸೇರ್ಪಡೆಯಾಗಿದೆ.
ಒಕ್ಕಲಿಗ ಸಮಾಜದ ಕೆಲ ಮುಖಂಡರು ಇಂದು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಬೆಂಬಲ ಸೂಚಿಸಿದರು.
ಸಭೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಸೇರ್ಪಡೆಯಾಗಿರುವ ಸತ್ಯನಾರಾಯಣ ಅವರು ಸಿದ್ದರಾಮಯ್ಯ ಅವರನ್ನು ಗಾಂಧೀಜಿಗೆ ಹೋಲಿಸಿದರು. ಗಾಂಧೀಜಿ ಅವರು ಎಲ್ಲಾ ಜನಾಂಗದ ನಾಯಕರಾಗಿದ್ದರು ಅವರ ಹಾಗೆ ಸಿದ್ದರಾಮಯ್ಯ ಕೂಡ ಎಲ್ಲಾ ಜನಂಗಾಕ್ಕೂ ಹಣ ಬಿಡುಗಡೆ ಮಾಡಿದ್ದಾರೆ .ಅವರನ್ನು ಜನರು ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಜೆಡಿಎಸ್‌ನಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಸಿದ್ದೇಗೌಡ ಅವರು ಮಾತನಾಡಿ ಜಿ.ಟಿ.ದೇವೇಗೌಡ ಅವರಿಗೂ ಸಿದ್ದರಾಮಯ್ಯ ಅವರಿಗೂ ಎಲ್ಲಾ ವಿಚಾರಗಳಲ್ಲೂ ಅಜಗಜಾಂತರ. ವ್ಯಕ್ತಿತ್ವ, ರಾಜೀಯ ಕ್ಷೇತ್ರದಲ್ಲೂ ಅಜಗಜಾಂತರ ಎಂದರು.
ಕಾಂಗ್ರೆಸ್ ನಾಯಕಿ ಮಂಜುಳಾ ಮಾನಸ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜಾಮುಂಡೇಶ್ವರಿ ಜನತೆ ಯಾವತ್ತೂ ಜಾತಿ ರಾಜಕೀಯ ಮಾಡಲಿಲ್ಲ. ಒಕ್ಕಲಿಗರು ಸಿಎಂ ಪರ ನಿಲ್ಲುತ್ತಾರೆ ಎಂದರು.
ಸಾಮಾಜಿಕ ತಾಣಗಳಲ್ಲಿ ಭಾರೀ ಚರ್ಚೆ
ಕ್ಷೇತ್ರದಲ್ಲಿ ಒಕ್ಕಲಿಗರೂ ಸಂಪೂರ್ಣವಾಗಿ ಜಿಟಿಡಿ ಅವರ ಬೆಂಬಲಕ್ಕೆ ನಿಲ್ಲಲಿದ್ದು ಸಿಎಂ ಸಿದ್ದರಾಮಯ್ಯ ಸೋಲು ಖಚಿತ ಎನ್ನುವ ಬರಹಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು ಆ ಬೆನ್ನಲ್ಲೇ ಈ ಸಭೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ
ಪಿಎಸ್ಐ ನೇಮಕಾತಿ ಅಕ್ರಮ : ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ವಿಜಯಪುರ : ಸಿಡಿಲಿಗೆ 14 ಕುರಿಗಳು ಸಾವು : ಸೂಕ್ತ ಪರಿಹಾರಕ್ಕೆ ಒತ್ತಾಯ
ಗುತ್ತಿಗೆದಾರರ ಬೇಜವಾಬ್ದಾರಿ, ಕಾಮಗಾರಿ ವಿಳಂಬದಿಂದ ಮನೆಗಳಿಗೆ ನೀರು :ಎಸ್.ಟಿ.ಸೋಮಶೇಖರ್ ಕಿಡಿ
MUST WATCH
ಹೊಸ ಸೇರ್ಪಡೆ
ಟಿವಿಎಸ್ ನಿಂದ ಹೊಸ ಮಾದರಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ
ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ