6 ತಿಂಗಳು ಓಲಾ ಟ್ಯಾಕ್ಸಿ ಪರವಾನಗಿ ಅಮಾನತು


Team Udayavani, Mar 23, 2019, 12:10 AM IST

1-rrew.jpg

ಬೆಂಗಳೂರು: ನಗರದಲ್ಲಿ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆ ನೀಡುವ ಓಲಾ ಸಂಸ್ಥೆ, ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ಆ ಸಂಸ್ಥೆಗೆ ನೀಡಿದ ಪರವಾನಗಿ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.

ಇತ್ತೀಚಿನ ದಿನಗಳಲ್ಲಿ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆಗೆ ನಗರದ ಜನರು ಹೆಚ್ಚು ಮಾರು ಹೋಗಿದ್ದು, ಪರಿಣಾಮ ತಮ್ಮ ಸೇವಾ ವ್ಯಾಪ್ತಿ ವಿಸ್ತರಿಸುವ ಭರದಲ್ಲಿ ಓಲಾ ಸಂಸ್ಥೆಯು ನಿಯಮಗಳನ್ನು ಗಾಳಿಗೆ ತೂರಿ, ಆ್ಯಪ್‌ ಆಧಾರಿತ ಬೈಕ್‌ ಸಂಚಾರ ಸೇವೆ ಆರಂಭಿಸಿದೆ. ಆ ಮೂಲಕ ನಿಯಮಗಳನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳು -2018ರ 11 (1)ರ ರಂತೆ ಸಂಸ್ಥೆಗೆ ನೀಡಲಾಗಿದ್ದ ಪರವಾನಗಿ ಅಮಾನತುಗೊಳಿಸಿ, ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸಬೇಕೆಂದು ಸಾರಿಗೆ ಇಲಾಖೆ ಆದೇಶ
ಹೊರಡಿಸಿದೆ.

ಸಾರಿಗೆ ಇಲಾಖೆಯ ನಿಯಮಗಳಂತೆ ಅನಿ ಟೆಕ್ನಾಲಜಿಸ್‌ ಪ್ರೈವೇಟ್‌ ಲಿಮಿಟೆಡ್‌ ಹೆಸರಿನ ಓಲಾ ಸಂಸ್ಥೆಗೆ ಕೇವಲ ಆ್ಯಪ್‌ ಆಧಾರಿತ ಮೋಟರು ಕ್ಯಾಬ್ಸ್ ಸೇವೆ ಒದಗಿಸಲು ಮಾತ್ರ ಪರವಾನಗಿ ನೀಡಲಾಗಿದೆ. ಆದರೆ, ಇತ್ತೀಚೆಗೆ ಓಲಾ ಸಂಸ್ಥೆಯು ಆ್ಯಪ್‌ ಆಧಾರಿತ ಬೈಕ್‌ ಸೇವೆಯನ್ನು ಕಾನೂನು ಬಾಹಿರವಾಗಿ ಆರಂಭಿಸಿರುವುದು ತನಿಖೆಯಿಂದ ಬಯಲಾಗಿದೆ. ಬೆಂಗಳೂರು ನಗರದಲ್ಲಿ ನಗರ ಸಾರಿಗೆ ಸಂಪೂರ್ಣ ರಾಷ್ಟ್ರೀಕರಣವಾಗಿರುವ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಆ್ಯಪ್‌ ಮೂಲಕ ಬೈಕ್‌ ಸೇವೆ ನೀಡುತ್ತಿರುವುದು ಪರಿಶೀಲನೆಯಿಂದ ದೃಢಪಟ್ಟಿದೆ. ಆ ಹಿನ್ನೆಲೆಯಲ್ಲಿ ನಿಯಮ ಉಲ್ಲಂ ಸಿದ ಸಂಸ್ಥೆಯ ಪರವಾನಗಿ ಏಕೆ ಅಮಾನತು ಅಥವಾ ರದ್ದುಗೊಳಿಸಬಾರದು ಎಂಬುದಕ್ಕೆ ಸ್ಪಷ್ಟನೆ ನೀಡುವಂತೆ ಸಾರಿಗೆ ಇಲಾಖೆ, ಓಲಾ ಸಂಸ್ಥೆಗೆ ನೋಟಿಸ್‌ಜಾರಿಗೊಳಿಸಿತ್ತು.

ಆದರೆ, ಓಲಾ ಸಂಸ್ಥೆಯ ಆಡಳಿತ ವರ್ಗ ಸಮಪರ್ಕವಾಗಿ ಉತ್ತರ ನೀಡದ ಹಿನ್ನೆಲೆಯಲ್ಲಿ ಆರು ತಿಂಗಳ ಮಟ್ಟಿಗೆ ಸಂಸ್ಥೆಗೆ ನೀಡಿರುವ ಪರವಾನಗಿ ಅಮಾನತುಗೊಳಿಸಿದ್ದು, ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್‌ ಜಾರಿಗೊಳಿಸಿದ್ದಾರೆ.

ಸರ್ಕಾರದ ಆದೇಶಕ್ಕೆ ಬೆಲೆಯಿಲ್ಲ: ಸಾರಿಗೆ ಇಲಾಖೆಯ ಆಯುಕ್ತರು ಓಲಾ ಸಂಸ್ಥೆಗೆ ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿ ಮೂರು ದಿನಗಳು ಕಳೆದಿದೆ. ಆದರೆ, ಓಲಾ ಸಂಸ್ಥೆ ಮಾತ್ರ ಸರ್ಕಾರದ ಆದೇಶಕ್ಕೆ ಮನ್ನಣೆ ನೀಡಿಲ್ಲ.

ಬೈಕ್‌ ಸೇವೆ ಕೇವಲ ಪ್ರಾಯೋಗಿಕವಷ್ಟೇ
ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಓಲಾ ಮೂಲಸೌಕರ್ಯ, ಉತ್ತಮ ಸಂಚಾರ ವ್ಯವಸ್ಥೆ, ಹೊಸ ತಂತ್ರಜ್ಞಾನಗಳ ಬಳಕೆಯಲ್ಲಿ ಮುಂದಿದೆ. ಬೇರೆ ಸಂಸ್ಥೆಗಳು ಅನಧಿಕೃತವಾಗಿ ಬೈಕ್‌ ಸೇವೆ ಮುಂದುವರಿಸುತ್ತಿವೆ. ಆದರೆ, ಓಲಾ ಸಂಸ್ಥೆಯಿಂದ ಸಂಚಾರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತಾದರೂ, ಕೆಲವು ತಿಂಗಳ ಹಿಂದೆಯೇ ಬೈಕ್‌ ಸೇವೆ ಸ್ಥಗಿತಗೊಳಿಸಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು. ಸರ್ಕಾರ ಹೊರಡಿಸಿರುವ ಅಮಾನತು ಆದೇಶದ ಕುರಿತು ನೇರವಾಗಿ ಸರ್ಕಾರದೊಂದಿಗೆ ಮಾತನಾಡಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ನಡೆಯೇನು?

ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಓಲಾ ಸಂಸ್ಥೆಗೆ ನೀಡಿರುವ ಪರವಾನಗಿಯನ್ನು ವಾಪಸ್‌ ನೀಡುವಂತೆ ಸಾರಿಗೆ ಇಲಾಖೆ ನೋಟಿಸ್‌ನಲ್ಲಿ ತಿಳಿಸಿದೆ. ಅದರಂತೆ ಓಲಾ ಸಂಸ್ಥೆಯವರು ಮೂರು ದಿನಗಳಲ್ಲಿ ಪರವಾನಗಿಯನ್ನು ಸಾರಿಗೆ ಇಲಾಖೆಗೆ ಸಲ್ಲಿಸಬೇಕಾಗಿದೆ. ಒಂದೊಮ್ಮೆ ಸಲ್ಲಿಸದಿದ್ದರೆ ಅಂತಹ ಕಾರುಗಳನ್ನು ಹಿಡಿದು ಜಪ್ತಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಓಲಾ ಸಂಸ್ಥೆಯವರು ನಿಯಮಗಳನ್ನು ಗಾಳಿಗೆ ತೂರಿ ಬೈಕ್‌ ಸೇವೆ ಆರಂಭಿಸಿದ್ದರಿಂದ ಕ್ರಮಕೈಗೊಳ್ಳುವಂತೆ ಸಂಚಾರ ಇಲಾಖೆಗೆ ದೂರು ನೀಡಲಾಗಿತ್ತು. ಅದರಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕಾನೂನು ಬಾಹಿರವಾಗಿ ಬೈಕ್‌ ಸೇವೆ ಒದಗಿಸುತ್ತಿರುವುದನ್ನು ಪತ್ತೆ ಹಚ್ಚಿದ್ದು, ನಾಲ್ಕೈದು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
● ತನ್ವೀರ್‌ ಪಾಷ, ರಾಜ್ಯ ಓಲಾ, ಉಬರ್‌ ಚಾಲಕರು, ಮಾಲೀಕರ ಸಂಘ

ಟಾಪ್ ನ್ಯೂಸ್

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

siddaramaiah

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕಾಮಗಾರಿ

ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕಾಮಗಾರಿ

4 ವರ್ಷವಾದರೂ ಮುಗಿಯದ ಕಚೇರಿ ಕಾಮಗಾರಿ

4 ವರ್ಷವಾದರೂ ಮುಗಿಯದ ಕಚೇರಿ ಕಾಮಗಾರಿ

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.