ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ
Team Udayavani, Aug 9, 2022, 6:38 PM IST
ಪುತ್ತೂರು: ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಆಧಾರದ ಮೇಲೆ ಒಟ್ಟು 7 ಆರೋಪಿಗಳನ್ನು ಇದುವರೆಗೆ ಬಂಧಿಸಿದಂತಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಎಲ್ಲಾ ದಾಳಿಕೋರರನ್ನು ಗುರುತಿಸಲಾಗಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಆತ್ಮಾಹುತಿ ಬಾಂಬ್ ದಾಳಿಗೆ ನಾಲ್ವರು ಪಾಕ್ ಸೈನಿಕರ ಸಾವು